ಶಿವಮೊಗ್ಗ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಅಪ್ಪ, ಮಗಳ ದಾರುಣ ಸಾವು

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 07, 2023 | 2:47 PM

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ 2 ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು ಮದಿಯಾ(12) ಮೃತರು.

ಶಿವಮೊಗ್ಗ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಅಪ್ಪ, ಮಗಳ ದಾರುಣ ಸಾವು
ಶಿವಮೊಗ್ಗ ಕಾರು ಅಪಘಾತ
Follow us on

ಶಿವಮೊಗ್ಗ, ಸೆ.07: ಸಾವು ಯಾವಾಗ, ಹೇಗೆ ಬರುತ್ತದೆ ಎಂದು ಹೇಳುವುದು ಕಷ್ಟ. ಅದರಂತೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ 2 ಕಾರುಗಳ ನಡುವೆ ಡಿಕ್ಕಿಯಾಗಿ (Accident) ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು ಮದಿಯಾ(12) ಮೃತರು. ಇನ್ನುಳಿದಂತೆ ಕಾರಿನಲ್ಲಿದ್ದ 6 ಜನರಿಗೆ ಸಣ್ಣಪುಟ್ಟ ಗಾಯಗಳಾದರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಇಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ಚಿಕ್ಕಮಗಳೂರಿನ ಖಾಸಗಿ ಬಸ್ ಅಪಘಾತವಾಗಿ ಗಾಯಾಳು ವಿದ್ಯಾರ್ಥಿನಿಯನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದ ಗಾಯಾಳು ತುಳಸಾ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಮುಂದೆ ಮುಟ್ಟಿಸ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ಪೊಲೀಸರು ಶಿವಮೊಗ್ಗಕ್ಕೆ ಆಗಮಿಸಿದ್ದು, ತುಳಸಿ ಮೃತದೇಹವನ್ನು ಮೆಗ್ಗಾನ್​ಗೆ ತರೀಕೆರೆ ಪೊಲೀಸರು ರವಾನೆ ಮಾಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ.

ಇದನ್ನೂ ಓದಿ:ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ತಡೆಗೆ ಮತ್ತೊಂದು ಕ್ರಮ; 24 ಕಡೆಗಳಲ್ಲಿ ನಿರ್ಮಾಣವಾಗಲಿದೆ ಸ್ಕೈವಾಕ್‌

ಬಸ್​ ಚಾಲಕನ ಬಂಧನ

ಇನ್ನು ದುಗ್ಲಾಪುರ ಗ್ರಾಮದಲ್ಲಿ ಖಾಸಗಿ ಬಸ್ ಅಪಘಾತವಾಗುತ್ತಿದ್ದಂತೆ ಬಸ್ ಬಿಟ್ಟು ಎಸ್ಕೇಪ್ ಆಗಿದ್ದ ಚಾಲಕ ಜೀತೆಂದ್ರ ಎಂಬಾತನನ್ನು ತರೀಕೆರೆ ಬಸ್​ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಾಲಕನ ಅತಿವೇಗದ ಚಾಲನೆಯಿಂದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತ ಮೃತ ವಿದ್ಯಾರ್ಥಿನಿಯ ಸಂಬಂಧಿಕರ ಗೋಳಾಟ ಹೇಳತೀರದ್ದಾಗಿದೆ. ಇನ್ನು ಅಪಘಾತವಾದ ಸಮಯದಲ್ಲಿ ಮೃತ ತುಳಸಾ ‘ನಾನು ಸಾಯುತ್ತೇನೆ ಎನ್ನುತ್ತಿದ್ದರಂತೆ ಎಂದು ಪ್ರತ್ಯಕದರ್ಶಿಯೊಬ್ಬರು ಹೇಳಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 7 September 23