ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯಪೂರ್ವಕ ಮೊಟ್ಟೆ ತಿನ್ನಿಸಿದ ಶಿಕ್ಷಕ, ಕ್ರಮಕ್ಕೆ ಪೋಷಕರ ಆಗ್ರಹ

| Updated By: ನಯನಾ ರಾಜೀವ್

Updated on: Nov 23, 2023 | 10:03 AM

ಶಾಲೆಗಳಲ್ಲಿ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಬಾಳೆಹಣ್ಣು ನೀಡಲಾಗುತ್ತದೆ. ಆದ್ರೆ, ಇಲ್ಲೋರ್ವ ಶಿಕ್ಷಕ ಬಾಹ್ಮಣ ವಿದ್ಯಾರ್ಥಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಶಿಕ್ಷಕನ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿಯ ಪೋಷಕರು ಆಗ್ರಹಿಸಿದ್ದಾರೆ. ಈ ಘಟನೆ ನಡೆದಿದ್ದು ಎಲ್ಲಿ? ಏನು ಎನ್ನುವ ವಿವರ ಈ ಕೆಳಗಿನಂತಿದೆ.

ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯಪೂರ್ವಕ ಮೊಟ್ಟೆ ತಿನ್ನಿಸಿದ ಶಿಕ್ಷಕ, ಕ್ರಮಕ್ಕೆ ಪೋಷಕರ ಆಗ್ರಹ
ಶಾಲೆ
Follow us on

ಶಿವಮೊಗ್ಗ, (ನವೆಂಬರ್ 23): ಶಾಲೆಯಲ್ಲಿ ಶಿಕ್ಷಕನೋರ್ವ (Teacher) ಒತ್ತಾಯಪೂರ್ವಕವಾಗಿ ಬ್ರಾಹ್ಮಣ ವಿದ್ಯಾರ್ಥಿನಿಗೆ(Student)  ಮೊಟ್ಟೆ(Egg) ತಿನ್ನಿಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ(School) ಈ ಘಟನೆ ಬೆಳಕಿಗೆ ಬಂದಿದೆ. ಅಮೃತ ಗ್ರಾಮದ ಶಾಲೆಯ ಶಿಕ್ಷಕರೊಬ್ಬರು ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಬ್ರಾಹ್ಮಣ ವಿದ್ಯಾರ್ಥಿನಿಗೆ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆ. ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಬಾಲಕಿ ತಂದೆ ಶ್ರೀಕಾಂತ್ ಆರೋಪಿಸಿದ್ದು, ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಾಸಕರು, ಜಿಲ್ಲಾ ಉಪ ನಿರ್ದೇಶಕರು, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ, ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Meals) ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ (Egg) ಅಥವಾ ಬಾಳೆ ಹಣ್ಣು (Banana) ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಿದೆ. ಇನ್ನು ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದು, ಕೆಲವರು ಮೊಟ್ಟೆ ಬದಲಿಗೆ ಬಾಳೆಹಣ್ಣು ನೀಡುವಂತೆ ಒತ್ತಾಯಿಸಿದ್ದರೆ, ಇನ್ನೂ ಕೆಲವರು ಪೌಷ್ಠಿಕಾಂಶದ ದೃಷ್ಟಿಯಿಂದ ಮಕ್ಕಳಿಗೆ ಮೊಟ್ಟೆಯನ್ನೇ ವಿತರಿಸಬೇಕೆಂದು ಆಗ್ರಹಿಸಿದ್ದರು.

ಈ ಹಿನ್ನೆಲೆ ಸರ್ಕಾರ ಮೊಟ್ಟೆ ಹಾಗೂ ಬಾಳೆಹಣ್ಣು ಎರಡನ್ನೂ ವಿತರಿಸಲು ಆದೇಶಿಸಿದ್ದು, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುವಂತೆ ಆದೇಶದಲ್ಲಿ ಸೂಚಿಸಿತ್ತು. ಆದ್ರೆ, ಶಿವಮೊಗ್ಗದಲ್ಲಿ ಶಿಕ್ಷಕ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಮಾತ್ರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:03 am, Thu, 23 November 23