ಶಿವಮೊಗ್ಗ, ಜುಲೈ 6: ಶಿವಮೊಗ್ಗದ ಲಯನ್ ಸಫಾರಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಣಗೆರೆಕಟ್ಟೆ ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಚಿತ್ರದುರ್ಗಕ್ಕೆ ತೆರಳುತ್ತಿದ್ದ ಕಾರು ಮತ್ತು ಜೋಗ ತೆರಳುತ್ತಿದ್ದ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಕಾರಿನನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವರ ದರ್ಶನ ಪಡೆದು ವಾಪಸ್ ತೆರಳುತ್ತಿದ್ದ ಮೂವರು ಮಸಣ ಸೇರಿದ್ದಾರೆ.
ಅಪಾಘಾತದಲ್ಲಿ ತೀರ್ಥಹಳ್ಳಿಯ ಹಣಗೆರೆಕಟ್ಟೆಯ ದೇವಿಯ ದರ್ಶನ ಪಡೆದು ವಾಪಸ್ ಹೋಗುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಮಾಂ ಸಾಬ್, ಸಿದ್ದಪ್ಪ ಮತ್ತು ಚಂದ್ರು ಮೂವರು ಮೃತ ದುರ್ವೈವಿಗಳು. ಘಟನೆಯಲ್ಲಿ ಜೋಗಕ್ಕೆ ತೆರಳುತ್ತಿದ್ದ ಇನ್ನೋವಾ ಕಾರ್ ಚಾಲಕ ಗಿರೀಶ್ ತಲೆ ಮತ್ತು ಎದೆಗೆ ಪೆಟ್ಟು ಬಿದ್ದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಮಹಿಳೆಯೊಬ್ಬಳ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೋವಾದಲ್ಲಿದ್ದ ನಾಲ್ವರು ವಿದೇಶಿ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯವಾಗಿವೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಪ್ರೇಮಿಗಳ ಮೇಲೆ ನೈತಿಕ ಪೊಲೀಸ್ಗಿರಿ: ಸ್ಥಳೀಯ ಯುವಕರಿಂದ ಹಲ್ಲೆ, ಅನುಚಿತ ವರ್ತನೆ ಆರೋಪ
ಕಳೆದ ಒಂದು ವಾರದಿಂದ ಶಿವಮೊಗ್ಗದಲ್ಲಿ ಮಳೆ ಜೋರಾಗಿದೆ. ಸಾಗರ ಶಿವಮೊಗ್ಗ ಹೈವೇಯಲ್ಲಿ ವೇಗವಾಗಿ ಹೋಗುತ್ತಿದ್ದ ಎರಡು ಕಾರುಉಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಇದ್ದರು ಅದರಲ್ಲಿ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮತ್ತೆ ಕಾರಿನಲ್ಲಿದ್ದ ಮಹಿಳೆ ಓಬ್ಬರ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗದ ಚಳ್ಳಕೆರೆಯ ದೊಡ್ಡೆರಿ ಗ್ರಾಮದಿಂದ ತಿರ್ಥಹಳ್ಳಿಯ ಹಣಗೆರೆಕಟ್ಟೆ ದೇವಸ್ಥಾನಕ್ಕೆ ನಿನ್ನೆ ಬಂದಿದ್ದರು. ನಿನ್ನೆ ಅಮವಾಸ್ಯೆ ಹಿನ್ನಲೆಯಲ್ಲಿ ವಿಶೇಷ ಪೂಜೆಗೆಂದು ಈ ನಾಲ್ವರು ಬಂದಿದ್ದರು. ನಿನ್ನೆ ದೇವಸ್ಥಾನ ಬಳಿಯಲ್ಲೇ ತಂಗಿದ್ದರು. ಇಂದು ಬೆಳಗ್ಗೆ ಪೂಜೆ ಮುಗಿಸಿಕೊಂಡು ವಾಪಸ್ ತಮ್ಮ ಊರಿನತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಿಂದ ಮೃತರ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:30 pm, Sat, 6 July 24