ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಶಿವಮೊಗ್ಗದ ಯುವಕ ಸಾವು

ಸೆಲ್ಫಿ ಕ್ರೇಜ್​ಗೆ ಯುವಕನೊಬ್ಬ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ​ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಶಿವಮೊಗ್ಗದ ಯುವಕ ಸಾವು
ಕಲ್ಯಾಣಿಗೆ ಬಿದ್ದು ಶಿವಮೊಗ್ಗದ ಯುವಕ ಸಾವು
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 25, 2024 | 10:04 PM

ಶಿವಮೊಗ್ಗ, ಆ.25:  ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ​ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ; ಸವಾರ ಸಾವು

ಗದಗ: ಲಕ್ಕುಂಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಹಾಗೂ​ ಸ್ಕೂಟಿ ನಡುವೆ ಡಿಕ್ಕಿಯಾಗಿ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪ್ರಜ್ವಲ್​ ಮೃತ ಬಾಲಕ. ಅಪಘಾತದ ಬಳಿಕ ಸರ್ಕಾರಿ ಬಸ್ ಚಾಲಕ ಪರಾರಿಯಾಗಿದ್ದು, ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಕೊಲ್ಲಾಪುರದಿಂದ ಗಂಗಾವತಿಗೆ ಹೊರಟಿದ್ದ ಬಸ್, ಟ್ರ್ಯಾಕ್ಟರ್ ಓವರ್‌ ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಮಂಡ್ಯ: ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ, ಇತ್ತ ಪತಿ ಕೂಡ ಕೆರೆಗೆ ಹಾರಿ ಸಾವು; ಆಗಿದ್ದೇನು?

ಉತ್ತರ ಕನ್ನಡ: ಕಾರವಾರದ ಬೈತ್‌ಕೋಲಾದ ಬಳಿಯ ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೀನುಗಾರಿಕೆ ನಡೆಸಲು ಹೊರರಾಜ್ಯದಿಂದ ಆಗಮಿಸಿದ್ದ ಕಾರ್ಮಿಕನ ಶವ ಇರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವದ ಗುರುತು ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ