Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವಂತಹ ಘಟನೆ ಶಿಕಾರಿಪುರ ತಾಲ್ಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್​ನಲ್ಲಿ ನಡೆದಿದೆ. ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 18, 2023 | 3:13 PM

ಶಿವಮೊಗ್ಗ: ಈಜಲು ತೆರಳಿದ್ದ ಯುವಕ (young boy) ನೀರು ಪಾಲಾಗಿರುವಂತಹ ಘಟನೆ ಶಿಕಾರಿಪುರ ತಾಲ್ಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್​ನಲ್ಲಿ ನಡೆದಿದೆ. ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರಿಂದ ಹಣ ವಸೂಲಿ: ನಕಲಿ ಪೊಲೀಸ್​ ಬಂಧನ

ಕೊಪ್ಪಳ: ಅರಣ್ಯ ಇಲಾಖೆ ಪೊಲೀಸ್​ ಅಂತಾ ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಗಂಗಾಪುರಪೇಟೆಯ ನಿವಾಸಿ ಸಂಜಯ್ ಕೊಪ್ಪದ ಬಂಧಿತ ಆರೋಪಿ. ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಮೇ 25ರಂದು ಕೊಪ್ಪಳ ಬಳಿ ಬೈಕ್ ಸವಾರ ಬೊಚನಹಳ್ಳಿಯ ಹನುಮೇಶ್​​​ ಎಂಬುವವರ ಬಳಿ ಹಣ ವಸೂಲಿ ಮಾಡಿದ್ದರು. ಗಂಧದ ಕಟ್ಟಿಗೆ ಕಳವುವಾಗಿದೆ, ನಿಮ್ಮ ಮೇಲೆ ಅನುಮಾನವಿದೆ ಎಂದಿದ್ದ.

ಇದನ್ನೂ ಓದಿ: Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ

ಹನುಮೇಶ್​ ಬಳಿ 49,000 ನಗದು, 2 ಚಿನ್ನದ ಉಂಗುರ ದೋಚಿದ್ದ. ಅನುಮಾನ ಬಂದು ಗ್ರಾಮೀಣ ಠಾಣೆಗೆ ಹನುಮೇಶ್ ದೂರು ನೀಡಿದ್ದಾರೆ. ದೂರು ಆಧರಿಸಿ ಆರೋಪಿಯನ್ನು ಅರೆಸ್ಟ್​ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಮಂಡ್ಯ: ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ವೃತ್ತದ ಬಳಿ ನಡೆದಿದೆ. ಮರಿಲಿಂಗಯ್ಯ(65) ಮೃತ ವ್ಯಕ್ತಿ. ಬಸ್​ನಿಂದ ಇಳಿದು ರಸ್ತೆ ದಾಟುವಾಗ ಗೂಡ್ಸ್​ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ಮರಿಲಿಂಗಯ್ಯ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್