ಶಿವಮೊಗ್ಗ: ಆರು ವರ್ಷ ಪ್ರೀತಿಸಿ ಕೈಕೊಟ್ಟ ಯುವಕ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಆರು ವರ್ಷಗಳ ಕಾಲ ಪ್ರೀತಿಸಿ ದೈಹಿಕ ಸಂಪರ್ಕ ನಡೆಸಿ ಕೊನೆಗೆ ಯುವಕ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ಮಾಡಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ: ಆರು ವರ್ಷ ಪ್ರೀತಿಸಿ ಕೈಕೊಟ್ಟ ಯುವಕ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಪ್ರೀತಿಸಿದ ಯುವಕ ಮೋಸ ಮಾಡಿದನೆಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ
Follow us
Basavaraj Yaraganavi
| Updated By: Rakesh Nayak Manchi

Updated on: Nov 27, 2023 | 10:54 PM

ಶಿವಮೊಗ್ಗ, ನ.27: ಆರು ವರ್ಷಗಳ ಕಾಲ ಪ್ರೀತಿಸಿ ಕೊನೆಗೆ ಯುವಕ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೊಬ್ಬಳು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ (Suicide Attempt) ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರದ ಮಾರಿಗುಡ್ಡ ಬಡಾವಣೆಯಲ್ಲಿ ನಡೆದಿದೆ.

ಹೊಸನಗರ ಮೂಲದ ಸುಧಾ (27) ಮತ್ತು ಶ್ರೀಕಾಂತ್ (30) ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ಹೇಳಿ ಆಕೆಯೊಂದಿಗೆ ಶ್ರೀಕಾಂತ್ ದೈಹಿಕ ಸಂಪರ್ಕ ಕೂಡ ನಡೆಸಿದ್ದನು. ಕೊನೆಗೆ ಶ್ರೀಕಾಂತ್ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.

ಇದನ್ನೂ ಓದಿ: ತುಮಕೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ: 5 ನಿಮಿಷದ ವಿಡಿಯೋದಲ್ಲಿ ಸ್ಫೋಟಕ ಅಂಶ ಬಹಿರಂಗ

ಇದರಿಂದ ಮನನೊಂದು ಸುಧಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಸ್ವಸ್ಥ ಯುವತಿಯಲ್ಲಿದ್ದ ಮಗಳನ್ನು ಪೋಷಕರು ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಆತ್ಮಹತ್ಯೆಗೂ ಮುನ್ನ ಸುಧಾ ಮಾಡಿದ್ದ ವಿಡಿಯೋದಲ್ಲಿ ತನಗೆ ಮೋಸ ಮಾಡಿದ ಯುವಕ ಮತ್ತು ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿಕೊಂಡಿದ್ದು, ಯುವನ ವಿರುದ್ಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ