ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ದೂರು

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್​ಐಆರ್​ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಆಪ್​ ಪಕ್ಷದ ರಾಜ್ಯಸಭೆ ಸದಸ್ಯನಿಂದ ದೂರು
ಕೆ ಎಸ್ ಈಶ್ವರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 01, 2022 | 2:44 PM

ಶಿವಮೊಗ್ಗ: ಕೆಂಪುಕೋಟೆ (Red Fort) ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್ (AAP)​ ಪಕ್ಷದ ರಾಜ್ಯಸಭೆ ಸದಸ್ಯನಿಂದ  (Rajya Sabha Member) ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್​ಐಆರ್​ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ (Shivamogga) ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ನಾನು ರಾಷ್ಟ್ರಧ್ವಜಕ್ಕೆ ಯಾವುದೇ ಅವಮಾನ ಮಾಡಿಲ್ಲ. ಯಾರು ಅಪಮಾನ ಮಾಡ್ತಾರೆ ಅಂಥವರು ದೇಶದ್ರೋಹಿಗಳು. ಮುಂದೊಂದು ದಿನ ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸಬಹುದು ಅಂದಿದ್ದೇನೆ. ಈ ವಿಚಾರಕ್ಕಾಗಿ ಆಪ್​ನ ರಾಜ್ಯಸಭೆ ಸದಸ್ಯ ದೂರು ನೀಡಿದ್ದಾರೆ ದೂರು ಆಧರಿಸಿ ಪೊಲೀಸರು ಕ್ರಮ ವಹಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು ವಿವಿ ಸಂಘರ್ಷ: 28 ಕೋಟಿ ಬಿಡುಗಡೆಗೆ ವಿವಿ ಅಧಿಕಾರಿಗಳಿಗೆ ಕುಲಪತಿ ಒತ್ತಡ, ಮತ್ತೊಂದು ಆದೇಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಸಚಿವ ಸಿದ್ದರಾಮಯ್ಯ ನಡುವೆ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಇಬ್ಬರ ಬೆಂಬಲಿಗರಿಂದ ಮುಂದಿನ ಸಿಎಂ ಅಂತಾ ಘೋಷಣೆ ಮಾಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಮುಂದಿನ ಸಿಎಂ ಅಂತಾ ಘೋಷಣೆ ಕೂಗ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  ಸಿದ್ದರಾಮಯ್ಯಗೆ ಕ್ಷೇತ್ರ ಇನ್ನೂ ನಿಗದಿ ಆಗಿಲ್ಲ. ಸಿದ್ದರಾಮಯ್ಯ ಚುನಾವಣೆ ಸೋಲಿನ ಭಯದ ವಾತಾವರಣದಲ್ಲಿದ್ದಾರೆ.

ಇದನ್ನು ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ: ಪೊಲೀಸ್​ ಠಾಣೆ  ಎದುರೇ ಆತ್ಮಹತ್ಯೆಗೆ ಯತ್ನಿಸಿದ ರೇಖಾ

ಮುಂದಿನ ಸಿಎಂ ಡಿಕೆಶಿ ಎಂದು ಶಾಸಕ ರಂಗನಾಥ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಶಾಸಕ ರಂಗನಾಥ್ ವಿರುದ್ಧ ಡಿಕೆಶಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ಕೋಮುಗಲಭೆ ಮೂಲಕ ರಾಜಕೀಯ ಮಾಡುತ್ತದೆ.ಸಿದ್ದರಾಮಯ್ಯ ಆರ್ ಎಸ್ ಎಸ್ ಕುರಿತು ನೀಡಿದ ಹೇಳಿಕೆ ವಿಚಾರಚವಾಗಿ ಸಿದ್ದು ಎಲ್ ಕೆ ಜಿ ಸ್ಟೂಡೆಂಟ್ ಆಗಿದ್ದಾರೆ. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆರ್ ಎಸ್ ಎಸ್ ಕುರಿತು ವಿಷಯಾಂತರ ಮಾಡಲು ಸಿದ್ದರಾಮಯ್ಯ ಯಾವಾಗಲೂ ಮುಂದೆ ಇದ್ದಾರೆ. ಆದರೆ ಇದರಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೋಮುಗಲಭೆ ಮೂಲಕ ರಾಜಕೀಯ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:44 pm, Wed, 1 June 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್