AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು

ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
ಪೃಥ್ವಿಶಂಕರ
|

Updated on:Feb 01, 2021 | 6:05 PM

Share

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್​ನಲ್ಲಿ ಆಯನೂರು ಮಂಜುನಾಥ್ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು ಎಂದೂ ಆಯನೂರು ಮಂಜುನಾಥ್ ವಿಧಾನಪರಿಷತ್​ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದು ಇತ್ತೀಚೆಗೆ ನಡೆಯುತ್ತಿರುವ ದಂಧೆ ಅಲ್ಲ. ಎಲ್ಲ ಸರಕಾರಗಳು ಇದ್ದ ಸಂದರ್ಭದಲ್ಲೂ ಅವ್ಯಾಹತವಾಗಿ ನಡೆದುಕೊಂಡು ಬಂದಿದೆ. ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯ ಸೇರಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ಅಕ್ರಮ ಗಣಿ ಇಷ್ಟು ವರ್ಷ ಯಾಕೆ ಗಮನಕ್ಕೆ ಬಂದಿಲ್ಲ? ಇದರ ಹೊಣೆ ಯಾರು ಹೊತ್ತುಕೊಳ್ಳಬೇಕು? ಎಂದು ಪ್ರಶ್ನಿಸಿದರು.

ಈ ಸ್ಪೋಟದಲ್ಲಿ ತೀರಿಹೋದವರು ಕಾರ್ಮಿಕರಲ್ಲ.. ಯಾರೊ ಎಂಜಲು ಕಾಸು ತಿಂದು ಇಂತಹ ಅಕ್ರಮಕ್ಕೆ ಅವಕಾಶ ನೀಡಿ, ನಾವೆಲ್ಲಾ ಜೀವ ತ್ಯಾಗ ಮಾಡಬೇಕಿತ್ತಾ? ಈ ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ. ಈ ಸ್ಪೋಟದಲ್ಲಿ ತೀರಿಹೋದವರು ಪಾಲುದಾರರು. ಹೀಗಾಗಿ ಇವರಿಗೆ ಪರಿಹಾರ ನೀಡಬೇಡಿ. ಇವರೆಲ್ಲಾ ಸಮಾಜ ದ್ರೋಹಿಗಳು ಎಂದು ಸದನದಲ್ಲಿ ಆಕ್ರೋಶಭರಿತವಾಗಿ ಆಯನೂರು ಮಂಜುನಾಥ್ ಮಾತನಾಡಿದರು.

ಕ್ರಷರ್ ನಡೆಸೋಕೆ ನಾವು ಪರ್ಮಿಶನ್ ಕೊಟ್ಟಿಲ್ಲ ಅಂತಾರೆ. ಹಾಗಾದರೆ ಈಗಲೂ ಅಲ್ಲಿ ನಡೆಯುತ್ತಾ ಇದೆಯಲ್ಲ. ಈ ಐದು ಇಲಾಖೆಯ ಅಧಿಕಾರಿಗಳನ್ನು ( ಕಂದಾಯ-ಪರಿಸರ-ಗಣಿ-ಗೃಹ-ಅರಣ್ಯ) ತನಿಖೆಗೆ ಒಳಪಡಿಸಬೇಕು. ಗೃಹ ಇಲಾಖೆ ಏನ್ ಮಾಡ್ತಿದೆ? ಇದನ್ನು ಪಕ್ಷದ ದೃಷ್ಟಿಯಿಂದ ನೋಡೊದು ಬೇಡ, ಎಲ್ಲರ ಕಾಲದಲ್ಲೂ ಇದು ನಡೆದಿದೆ ಎಂದು ಎಲ್ಲಾ ರಾಜಕೀಯ ಪಕ್ಷಗಳನ್ನು ದೂಷಿಸಿ ಅವರು ಮಾತಾನಾಡಿದರು.

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

Published On - 5:48 pm, Mon, 1 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!