ಶಿವಮೊಗ್ಗ: ಬರ್ತ್‌ಡೇ ಆಚರಿಸಿಕೊಳ್ಳಲು ಬೈಕ್ ಮೇಲೆ ತೆರಳುತ್ತಿದ್ದವರು ಅಪಘಾತಕ್ಕೆ ಬಲಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ನಡೆದ ಅದೊಂದು ಘೋರ ದುರಂತ ಇವರಿಬ್ಬರ ಪ್ರಾಣ ತೆಗೆದಿದೆ.

ಅಪಘಾತದಲ್ಲಿ ಮೃತಪಟ್ಟ ಯುವಕರು
ಶಿವಮೊಗ್ಗ, ಜನವರಿ 01: ಹುಟ್ಟು ಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಭದ್ರಾವತಿ (Bhadravati) ತಾಲೂಕಿನ ಸೀಗೆಬಾಗಿ ಗ್ರಾಮದ ಬಳಿ ನಡೆದಿದೆ. ರಮೇಶ್ (23), ಚೇತನ್ (23) ಮೃತ ದುರ್ದೈವಿಗಳು. ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಸೀಗೆಬಾಗಿ ಗ್ರಾಮದ ಬಳಿ ಬೊಲೆರೊ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಲೆರೊ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುತ್ತಿದೆ…