ಶಿವಮೊಗ್ಗ: ಬರ್ತ್‌ಡೇ ಆಚರಿಸಿಕೊಳ್ಳಲು ಬೈಕ್​ ಮೇಲೆ ತೆರಳುತ್ತಿದ್ದವರು ಅಪಘಾತಕ್ಕೆ ಬಲಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್​​ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ನಡೆದ ಅದೊಂದು ಘೋರ ದುರಂತ ಇವರಿಬ್ಬರ ಪ್ರಾಣ ತೆಗೆದಿದೆ.

ಶಿವಮೊಗ್ಗ: ಬರ್ತ್‌ಡೇ ಆಚರಿಸಿಕೊಳ್ಳಲು ಬೈಕ್​ ಮೇಲೆ ತೆರಳುತ್ತಿದ್ದವರು ಅಪಘಾತಕ್ಕೆ ಬಲಿ
ಅಪಘಾತದಲ್ಲಿ ಮೃತಪಟ್ಟ ಯುವಕರು
Edited By: ವಿವೇಕ ಬಿರಾದಾರ

Updated on: Jan 01, 2024 | 11:52 AM

ಶಿವಮೊಗ್ಗ, ಜನವರಿ 01: ಹುಟ್ಟು ಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಭದ್ರಾವತಿ (Bhadravati) ತಾಲೂಕಿನ ಸೀಗೆಬಾಗಿ ಗ್ರಾಮದ ಬಳಿ‌ ನಡೆದಿದೆ. ರಮೇಶ್ (23), ಚೇತನ್ (23) ಮೃತ ದುರ್ದೈವಿಗಳು. ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್​​ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಸೀಗೆಬಾಗಿ ಗ್ರಾಮದ ಬಳಿ‌ ಬೊಲೆರೊ ವಾಹನ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಲೆರೊ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ…

Loading...
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More
Loading...
Unable to load recommendations.
Follow Us