ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ ದುರ್ದೈವಿಗಳು ಭದ್ರಾವತಿ ನಗರದ ನಿವಾಸಿಗಳಾಗಿದ್ದು, ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಘಟನೆ ನಡೆದಿದೆ.

TV9kannada Web Team

| Edited By: sandhya thejappa

Jan 27, 2022 | 8:58 AM

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ಭೀಕರ ಅಪಘಾತ (Accident) ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಕಾರಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂಬುವವರು ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಚಾಲಕನ ಎಡವಟ್ಟಿನಿಂದ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ ದುರ್ದೈವಿಗಳು ಭದ್ರಾವತಿ ನಗರದ ನಿವಾಸಿಗಳಾಗಿದ್ದು, ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಘಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪ್ರಿಯಕರನ ಜತೆ ತೆರಳಿದ್ದ ಮಹಿಳೆ ಸಾವು: ಪ್ರಿಯಕರನ ಜತೆ ತೆರಳಿದ್ದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಂಕೆರೆ ಗ್ರಾಮದ ದಿವ್ಯ (22) ಮೃತಪಟ್ಟಿದ್ದಾಳೆ. ಮೃತ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ದಿವ್ಯ 3 ತಿಂಗಳ ಹಿಂದೆ ಪತಿ ಬಿಟ್ಟು ಪ್ರಿಯಕರ ಮಂಜುನಾಥ್ ಜತೆ ತೆರಳಿದ್ದಳು. ಪ್ರಿಯಕರ ಮಂಜುನಾಥ್ ಜತೆ ದಿವ್ಯ ಹಿರಿಯೂರಲ್ಲಿ ವಾಸವಾಗಿದ್ದಳು. ಜ್ವರ ಎಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ದಿವ್ಯ ಮೃತಪಟ್ಟಿದ್ದಾಳೆ.

ದಿವ್ಯ ಮೈಮೇಲೆ ಬರೆ ಮತ್ತು ಪರಚಿದ ಗಾಯಗಳಿವೆ. ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಪ್ರಿಯಕರ ಮಂಜುನಾಥ್ ವಿರುದ್ಧ ದಿವ್ಯಳ ಪೋಷಕರು ಆರೋಪಿಸಿದ್ದು, ಆತ್ಮಹತ್ಯೆಗೆ ಯತ್ನಿಸಿ ಮಂಜುನಾಥ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ದಿವ್ಯಳ ಸಾವಿನಿಂದ ನೊಂದು ವಿಷ‌ ಸೇವಿಸಿದ್ದೆ ಎಂದು ಮಂಜುನಾಥ್ ಹೇಳುತ್ತಿದ್ದಾನೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದನ್ನೂ ಓದಿ

ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ

ಕಾಂಗ್ರೆಸ್ ತತ್ವ-ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಬರಲು ಇಚ್ಛಿಸುತ್ತಾರೋ ಅವರಿಗೆ ಸ್ವಾಗತವಿದೆ: ಸಿದ್ದರಾಮಯ್ಯ

Follow us on

Related Stories

Most Read Stories

Click on your DTH Provider to Add TV9 Kannada