ಶಿವಮೊಗ್ಗ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಈಗಾಗಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪೋಕ್ಸೋ ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಶಿವಮೊಗ್ಗ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಬಂಧನ
ಅತ್ಯಾಚಾರವೆಸಗಿದ ಆರೋಪಿ
Edited By:

Updated on: Aug 22, 2023 | 4:07 PM

ಶಿವಮೊಗ್ಗ, ಆ.22: ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ ಕುರಿತು ಶಿವಮೊಗ್ಗ(Shivamogga) ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಯನ್ನು ಬಂಧಿಸಲಾಗಿದೆ. ಶಿಕಾರಿಪುರದ ಅಜಮತ್ತುಲ್ಲಾ. ಎಂ ಅಲಿಯಾಸ್ ಇಬ್ಬು (23) ಬಂಧಿತ ಆರೋಪಿ. ಇನ್ನು ನೊಂದ ಬಾಲಕಿ ಆರೋಗ್ಯದಲ್ಲಿ ಏರುಪೇರಾದಾಗ ಪೋಷಕರು ವೈದ್ಯರ ಬಳಿಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢವಾಗಿದೆ. ಪೊಲೀಸ್​ ಠಾಣೆಗೆ ದೂರು ನೀಡಿದ್ದ ಪೋಷಕರು

ಹೌದು, ವಿಷಯ ತಿಳಿಯುತ್ತಿದ್ದಂತೆ ಪೋಷಕರು ಪೊಲೀಸ್​ ಠಾಣೆಗೆ ಹೋಗಿ, ಇತ ಕಳೆದ ಒಂದು ವರ್ಷದಿಂದ ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ದೂರು ನೀಡಿದ್ದಾರೆ. ಈ ಕುರಿತು ಶಿರಾಳಕೊಪ್ಪ ಠಾಣೆಯಲ್ಲಿ ಐಪಿಸಿ 376, ಪೋಕ್ಸೋ ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ತು ವರ್ಷಗಳ ಕಾಲ ಜೈಲಿನಲ್ಲಿದ್ದು ಹೊರಬಂದ ಮೇಲೆ ಮಾಡಿದ್ದು ಮತ್ತದೇ ಹೇಯ ಕೃತ್ಯ

ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು ದಾಳಿ; ಮೂವರು ಅರೆಸ್ಟ್​

ಮಂಗಳೂರು: ಹೊರವಲಯದ ಕಾವೂರು ಎಂ.ವಿ ಶೆಟ್ಟಿ ಕಾಲೇಜು ಬಳಿ ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತರು. ಆಗಸ್ಟ್​ 20ರಂದು ಸ್ಕೂಟಿಯಲ್ಲಿ ಬಂದು ಅಡ್ಡಹಾಕಿ ಅನ್ಯ ಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿ ಮಾಡಿದ್ದರು. ಈ ವೇಳೆ ತಪ್ಪಿಸಿಕೊಂಡರೂ ಆತನ ಮುಖಕ್ಕೆ ಗಾಯವಾಗಿತ್ತು. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳ ಜೊತೆ ಕೃತ್ಯಕ್ಕೆ ಬಳಸಿದ ತಲವಾರು, ವಾಹನವನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Tue, 22 August 23