Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

Crime News: ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಕಾರ್ಕಳದ ಮಿಯ್ಯಾರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ
ಆಗುಂಬೆ ಘಾಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 29, 2021 | 7:15 PM

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಆಗುಂಬೆ ಘಾಟ್​ನ (Agumbe Ghat) 9ನೇ ತಿರುವಿನಲ್ಲಿ ವ್ಯಾನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಈ ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಐವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸಾವನ್ನಪ್ಪಿರುವ ನಾಲ್ವರು ಕಾರ್ಕಳದವರು ಎಂದು ತಿಳಿದುಬಂದಿದೆ.

ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಕಾರ್ಕಳದ ಮಿಯ್ಯಾರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಅಫಘಾತಕ್ಕೀಡಾದ ವಾಹನ ಚಿಕ್ಕಮಗಳೂರಿನ ಕೊಪ್ಪಕ್ಕೆ ಇಂಟರ್ ಲಾಕ್ ಬ್ರಿಕ್ಸ್ ಗಳನ್ನು ಸರಬರಾಜು ಮಾಡಲು ತೆರಳಿ ಮಂಗಳೂರಿನ ಕಡೆಗೆ ವಾಪಾಸಾಗುತ್ತಿತ್ತು ಎನ್ನಲಾಗಿದೆ. ತೀರ್ಥಹಳ್ಳಿಯಿಂದ ಆಗುಂಬೆ ಘಾಟ್ ಮಾರ್ಗದಲ್ಲಿ ಬರುವಾಗ 9ನೇ ತಿರುವಿನಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಪೊಲೀಸರು ಮತ್ತು ಸ್ಥಳೀಯರು ಪ್ರಪಾತದಲ್ಲಿ ಬಿದ್ದಿದ್ದ ವಾಹನದಿಂದ ಮೃತದೇಹಗಳನ್ನು ಹೊರಗೆ ಎಳೆದಿದ್ದಾರೆ. ಉಳಿದವರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!

ಆಗುಂಬೆ: ಆಕಸ್ಮಿಕ ಬೆಂಕಿಯಿಂದ ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿತು ಭಾರೀ ಅವಗಢ

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು