AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ

ಮಳೆಗಾಲದ ಹಿನ್ನೆಲೆಯಲ್ಲಿ ಜೂನ್ 15 ರಿಂದ ಮುಗಿಯುವವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಭೂಕುಸಿತ ಮತ್ತು ಅಪಘಾತಗಳನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದ್ದು, ಉಡುಪಿ ಹಾಗೂ ಶಿವಮೊಗ್ಗ ನಡುವೆ ಸಂಚರಿಸುವ ವಾಹನಗಳಿಗೆ ಕೊಲ್ಲೂರು ಮತ್ತು ಶೃಂಗೇರಿ ಜಾಗೋಳಿ ಮಾರ್ಗವಾಗಿ ಪರ್ಯಾಯ ರಸ್ತೆಗಳನ್ನು ಕಲ್ಪಿಸಲಾಗಿದೆ.

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ
ಆಗುಂಬೆ ಘಾಟಿImage Credit source: The Hindu
Basavaraj Yaraganavi
| Edited By: |

Updated on: Jun 12, 2026 | 10:47 AM

Share

ಶಿವಮೊಗ್ಗ, ಜೂನ್ 12: ಮಳೆಗಾಲದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಆಗುಂಬೆ ಘಾಟಿಯಲ್ಲಿ(Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮುಖ್ಯಾಂಶಗಳು

  • ಆಗುಂಬೆ ಘಾಟಿಯಲ್ಲಿ ಜೂನ್ ಹದಿನೈದರಿಂದ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.
  • ಮಳೆಗಾಲದಲ್ಲಿ ಭೂಕುಸಿತ ಮತ್ತು ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
  • ಪ್ರಯಾಣಿಕರ ಅನುಕೂಲಕ್ಕಾಗಿ ಕೊಲ್ಲೂರು ಮತ್ತು ಶೃಂಗೇರಿ ಮಾರ್ಗವಾಗಿ ಪರ್ಯಾಯ ರಸ್ತೆ ಸೂಚಿಸಲಾಗಿದೆ.

ಹುಲಿಕಲ್ ಘಾಟಿಯಲ್ಲಿ ಭೂಕುಸಿತ

ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾದರೆ ರಸ್ತೆ ಬದಿಯ ಭೂಕುಸಿತ ಸಂಭವಿಸುವ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಅಪಾಯವಿದೆ. ಇದೇ ವೇಳೆ, ಮತ್ತೊಂದು ಪ್ರಮುಖ ಸಂಪರ್ಕ ರಸ್ತೆಯಾದ ಹುಲಿಕಲ್ ಘಾಟಿಯಲ್ಲೂ ಭೂಕುಸಿತ ಸಂಭವಿಸಿದ್ದು, ಅಲ್ಲಿನ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಆಗುಂಬೆ ಘಾಟಿ ಮಾರ್ಗವು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಉಡುಪಿ, ಮಂಗಳೂರು ಹಾಗೂ ಮಣಿಪಾಲ್ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗೆ ತೆರಳಲು ಪ್ರಮುಖ ಸಂಪರ್ಕವಾಗಿದೆ. ಇದೀಗ ಈ ಆದೇಶದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತವು ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

ಇದನ್ನೂ ಓದಿ ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಪರ್ಯಾಯ ಸಂಚಾರ ಮಾರ್ಗಗಳು

ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು: ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಅಥವಾ ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಸಂಚರಿಸಬೇಕು. ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು: ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಅಥವಾ ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ-ತೀರ್ಥಹಳ್ಳಿ ರಸ್ತೆಯನ್ನು ಬಳಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ