ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ, ಆರೋಪ

| Updated By: ವಿವೇಕ ಬಿರಾದಾರ

Updated on: Jan 02, 2024 | 2:55 PM

ಶಿವಮೊಗ್ಗ ಜಿಲ್ಲೆಯ ‌ಹೊಸನಗರ ತಾಲೂಕಿನ ದೇವಗಂಗೆ ಬಳಿ ಡಿಸೆಂಬರ್​ 31ರ ರಾತ್ರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹೊಸನಗರ ಮಂಡಲದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತಿನ್ ಹಲ್ಲೆ ಮಾಡಲಾಗಿದೆ.

ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ, ಆರೋಪ
ಹಲ್ಲೆಗೊಳಗಾದ ನಿತಿನ್​​, ಶಾಸಕ ಚನ್ನಬಸಪ್ಪ
Follow us on

ಶಿವಮೊಗ್ಗ, ಜನವರಿ 02: ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ‌ಹೊಸನಗರ ತಾಲೂಕಿನ ದೇವಗಂಗೆ ಬಳಿ ಡಿಸೆಂಬರ್​ 31ರ ರಾತ್ರಿ ಘಟನೆ ನಡೆದಿದೆ. ಹೊಸನಗರ ಮಂಡಲದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತಿನ್ ಹಲ್ಲೆ ಮಾಡಲಾಗಿದೆ. ನಿತನ್​ ಅವರನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಿಚಾರ ತಿಳಿಯುತ್ತಿದ್ದಂತೆ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ  ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನಿತಿನ್ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪ, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಕರ್ನಾಟಕದಲ್ಲಿ ಗೂಂಡಾ ರಾಜ್ಯ ನಡೆಯುತ್ತಲೇ ಬಂದಿದೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ನಮ್ಮ ಜಿಲ್ಲೆಯ ಹೊಸನಗರ ತಾಲೂಕಿನ ಯುವ ಮೋರ್ಚಾ ಅಧ್ಯಕ್ಷರಾದ ನಿತಿನ್ ಅವರ ಮೇಲೆ ಕಾಂಗ್ರೆಸ್ ಪಕ್ಷದ ಗೂಂಡಗಳು ಹಲ್ಲೆ ಮಾಡಿದ ಪ್ರಕರಣ. ದಿನದಿಂದ ದಿನಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಕಸರು ಗೂಂಡಾಗಳನ್ನಿಟ್ಟು ದಬ್ಬಾಳಿಕೆ ಮಾಡುತ್ತಿದ್ದು, ಕೆಳ ಹಂತದಲ್ಲಿ ಕಾಂಗ್ರೆಸ್ ಮುಖಂಡರೇ ಗೂಂಡಾಗಳಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೃಹ ಸಚಿವರು ಸುಮ್ಮನಿರುವುದು ದುರ್ದೈವದ ಸಂಗತಿ ಎಂದು ವಾಗ್ದಾಳಿ ಮಾಡಿದರು.

 

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Tue, 2 January 24