AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ 4 ಬಸ್​ಗಳಿಂದ 580 ಲೀಟರ್​ ಡೀಸೆಲ್ ಕಳ್ಳತನ

ನಾಲ್ಕು ಬಸ್​ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು ಕೈಚಳಕ ತೋರಿಸಿದ್ದಾರೆ. ತಡರಾತ್ರಿ ವೇಳೆ ಕೃತ್ಯ ನಡೆದಿದೆ ಎನ್ನಲಾಗಿದ್ದು ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್​ಗಳಿಂದ ಸುಮಾರು 580 ಲೀಟರ್​ ಡೀಸೆಲ್​ ದೋಚಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ 4 ಬಸ್​ಗಳಿಂದ 580 ಲೀಟರ್​ ಡೀಸೆಲ್ ಕಳ್ಳತನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 01, 2021 | 10:08 AM

Share

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನ ಹೊಂದಿರುವ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್​ಗಳಿಂದ ಸುಮಾರು 580 ಲೀಟರ್​ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್​ಗಳಿಂದ ಡೀಸೆಲ್​ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್​ಗಳಿಂದ ತಡರಾತ್ರಿ ವೇಳೆ ಡೀಸೆಲ್​ ಕದಿಯಲಾಗಿದೆ.

ನಾಲ್ಕು ಬಸ್​ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು ಕೈಚಳಕ ತೋರಿಸಿದ್ದಾರೆ. ತಡರಾತ್ರಿ ವೇಳೆ ಕೃತ್ಯ ನಡೆದಿದೆ ಎನ್ನಲಾಗಿದ್ದು ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್​ಗಳಿಂದ ಸುಮಾರು 580 ಲೀಟರ್​ ಡೀಸೆಲ್​ ದೋಚಲಾಗಿದೆ. ಈ ಬಸ್​ಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನ ಹೊಂದಿರುವ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿವೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಚೌಡೇಶ್ವರಿ ದೇಗುಲದ ಹುಂಡಿ ಒಡೆದು ಹಣ ದೋಚಿದ ಕಳ್ಳರು ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಿಆರ್‌ಟಿ ಕಾಲೋನಿಯಲ್ಲಿರುವ ಚೌಡೇಶ್ವರಿ ದೇಗುಲದಲ್ಲಿ ಕಳ್ಳತನ ನಡೆದಿದೆ. ಚೌಡೇಶ್ವರಿ ದೇವಾಲಯದ ಹುಂಡಿ ಒಡೆದು ಕಳ್ಳತನ ಮಾಡಲಾಗಿದ್ದು, ಹುಂಡಿಯಲ್ಲಿದ್ದ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ರಾತ್ರಿ ವೇಳೆ ಕಳ್ಳರು ಗ್ರಾಮ ದೇಗುಲಕ್ಕೆ ನುಗ್ಗಿ ಹುಂಡಿಯಲ್ಲಿದ್ದ ಹಣ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

theft

ಹುಂಡಿ ಒಡೆದು ಕಳ್ಳತನ

ಮನೆ ಕೆಲಸದಾಕೆಯಿಂದಲೇ ಕಳ್ಳತನ ಮನೆಯಲ್ಲಿ ಕೆಲಸ ಮಾಡುವವರೇ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣವೊಂದು ಬೆಂಗಳೂರಿನಲ್ಲಿ ದಾಖಲಾಗಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೈದ್ಯ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮ್ಮು ಎಂಬುವವರನ್ನು ಬಂಧಿಸಲಾಗಿದೆ. ಬಂಧಿತ ಅಮ್ಮುಳಿಂದ 235 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ವೈದ್ಯ ದಂಪತಿಗಳು ವರಮಹಾಲಕ್ಷ್ಮಿ ಪೂಜೆಯ ಸಂದರ್ಭದಲ್ಲಿ ಚಿನ್ನ ಇಡಲು ಹೋದಾಗ ಚಿನ್ನ ಕಳ್ಳತನವಾಗಿರುವ ಸಂಗತಿ ಬಯಲಾಗಿದೆ. ಆಗ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಕಷ್ಟು ಭದ್ರತೆ ಇರುವ ಸ್ಥಳದಲ್ಲಿ ವೈದ್ಯ ದಂಪತಿಗಳು ವಾಸವಿದ್ದುದರಿಂದ ಮನೆಯ ಕೆಲಸದವರ ಮೇಲೆ ಅನುಮಾನ ಹೆಚ್ಚಾಗಿದೆ. ತನಿಖೆ ಕೈಗೊಂಡ ನಂತರ ಅಮ್ಮು ಕೃತ್ಯ ಬಯಲಾಗಿದೆ.

ವೈದ್ಯರ ಮನೆಯಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಅಮ್ಮು, ಮನೆಯಲ್ಲಿದ್ದ ಚಿನ್ನವನ್ನು ಹಂತಹಂತವಾಗಿ ಕದ್ದೊಯ್ದಿದ್ದಳು. ಮನೆಯಲ್ಲಿ ನಾಲ್ವರು ಕೆಲಸಗಾರರಿದ್ದುದರಿಂದ ಅನುಮಾನ ಬಾರದಂತೆ ಕೃತ್ಯ ಎಸಗಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: BS Yediyurappa: ರಾಜ್ಯ ಪ್ರವಾಸಕ್ಕೆ 1 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ಮಾಜಿ ಸಿಎಂ ಯಡಿಯೂರಪ್ಪ 

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

Published On - 10:08 am, Wed, 1 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!