AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್ ಮೇಲೆ ಹಲ್ಲೆ: ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿದ ಪೊಲೀಸ್​

ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್​ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫು ಕಾಲಿಗೆ ಗುಂಡು ಹಾರಿಸು ಮೂಲಕ ಶಿವಮೊಗ್ಗ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್ ಮೇಲೆ ಹಲ್ಲೆ: ಆತ್ಮರಕ್ಷಣೆಗಾಗಿ ರೌಡಿಶೀಟರ್ ಕಾಲಿಗೆ  ಫೈರಿಂಗ್ ಮಾಡಿದ ಪೊಲೀಸ್​
ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫು
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 03, 2023 | 6:54 PM

Share

ಶಿವಮೊಗ್ಗ: ಕೊಲೆ ಯತ್ನ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ (shoots)​ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ದೊಡ್ಡದಾನವಂದಿ ಅರಣ್ಯದ ಬಳಿ ನಡೆದಿದೆ. ಮಾರ್ಕೆಟ್ ಫೌಜನ್​​ ಗ್ಯಾಂಗ್​ನ ಸದಸ್ಯನಾಗಿರುವ ರೌಡಿಶೀಟರ್​ ಸೈಫುಲ್ಲಾ ಖಾನ್​ ಅಲಿಯಾಸ್ ಸೈಫುಗೆ ಜಯನಗರ ಠಾಣೆ ಪಿಎಸ್​ಐ ನವೀನ್​ರಿಂದ ಫೈರಿಂಗ್​​ ಮಾಡಲಾಗಿದೆ. ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದಾಗ ಕಾನ್ಸ್​ಟೇಬಲ್​ ನಾಗರಾಜ್ ಮೇಲೆ ಸೈಫುಲ್ಲಾ ಖಾನ್​ನಿಂದ ಹಲ್ಲೆ ಮಾಡಲಾಗಿದೆ. ಆತ್ಮರಕ್ಷಣೆಗಾಗಿ ಸೈಫು ಕಾಲಿಗೆ ಗುಂಡು ಹಾರಿಸಲಾಗಿದೆ.

ಸದ್ಯ ಗಾಯಾಳು ಸೈಫುಲ್ಲಾ ಸೇರಿದಂತೆ ಪೊಲೀಸರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ತುಂಗಾನಗರ, ಜಯನಗರ ಠಾಣೆ ಸೇರಿದಂತೆ ದೊಡ್ಡಪೇಟೆ ಠಾಣೆಯೊಂದರಲ್ಲೇ ಸೈಫು ವಿರುದ್ಧ 16 ಕೇಸ್ ದಾಖಲಾಗಿವೆ.

ಎಸ್ಪಿ ಮಿಥುನ್ ಕುಮಾರ್ ಹೇಳಿದಿಷ್ಟು

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಎಸ್ಪಿ ಮಿಥುನ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಶಿವಮೊಗ್ಗದ ದೊಡ್ಡಪೇಟೆ, ಜಯನಗರ ಸೇರಿದಂತೆ ವಿವಿಧ ಠಾಣೆಯಲ್ಲಿ ರೌಡಿಶೀಟರ್ ಸೈಫು ವಿರುದ್ಧ 18 ಪ್ರಕರಣಗಳು ದಾಖಲಾಗಿವೆ. ಡಕಾಯಿತಿ, ರಾಬರಿ, ಏನ್ ಡಿ ಪಿ ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿವೆ. ಈತ ರೌಡಿ ಪೌಝಾನ್ ಸಹಚರ.

ಇದನ್ನೂ ಓದಿ: Bengaluru News: ಕಾಲೇಜು ಬಳಿಯೇ ಚಾಕುವಿನಿಂದ ಇರಿದು ಪಿಯು ವಿದ್ಯಾರ್ಥಿಯ ಕೊಲೆ

ಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 307 ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ. ಈತನನ್ನು ಬಂಧಿಸಲು ಜಯನಗರ ಪಿಎಸ್ಐ ನವೀನ್ ನೇತೃತ್ವದ ತಂಡ ತೆರಳಿತ್ತು. ಪಿಎಸ್​ಐ ನವೀನ್ ಪೊಲೀಸ್ ಸಿಬ್ಬಂದಿಗಳಾದ ಸಚಿನ್, ನಾಗರಾಜ್ ಬಂಧನ ಕಾರ್ಯಾಚರಣೆಯಲ್ಲಿ ಇದ್ದರು.

ರೌಡಿ ಸೈಫುಲ್ಲಾ ಬಂಧಿಸಲು ಮುಂದಾದಾಗ ಸಿಬ್ಬಂದಿ ಸಚಿನ್, ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಪಿಎಸ್ಐ ಆತ್ಮರಕ್ಷಣೆಗಾಗಿ ರೌಡಿಶೀಟರ್ ಸೈಫುಲ್ಲಾ ಕಾಲಿಗೆ ಗುಂಡು ಹಾರಿಸಿದ್ದಾರೆ. ಜೀವಕ್ಕೆ ಯಾವುದೇ ಅಪಾಯ ಇಲ್ಲ. ತನಿಖೆ ಮುಂದುವರಿಯುತ್ತೆ ಎಂದರು.

ಕಲಬುರಗಿಯಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿತ

ಕಲಬುರಗಿ: ಹಾಡಹಗಲೇ ನಗರದಲ್ಲಿ ಯುವಕನಿಗೆ ಚಾಕು ಇರಿದಿರುವಂತ ಘಟನೆ ಇಕ್ಬಾಲ್ ಕಾಲೋನಿಯಲ್ಲಿ ನಡೆದಿದೆ. ಮಹ್ಮದ್ ಹಸನ್(22) ಚಾಕು ಇರಿತಕ್ಕೊಳಗಾದ ಯುವಕ. ಇಂದು ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಹೋಟೆಲ್ ಮುಂದೆ ಕೂತಾಗ ಇಬ್ಬರು ಯುವಕರು ಚಾಕುವಿನಿಂದ ದಾಳಿ ಮಾಡಿ ಪರಾರಿ ಆಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹ್ಮದ್ ಹಸನ್​ ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಗಾಂಜಾ ಪೆಡ್ಲರ್​​ಗಳ ಬೆನ್ನತ್ತಿ ನೆರೆ ರಾಜ್ಯಕ್ಕೆ ತೆರಳಿದ ಬೆಂಗಳೂರು ಪೊಲೀಸರು: ಮಹಾರಾಷ್ಟ್ರದಲ್ಲಿ ನಡೆಯಿತು ಸಿನಿಮಿಯ ಘಟನೆ

ಹುಬ್ಬಳ್ಳಿಯಲ್ಲಿ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿ ಪತಿ ಪರಾರಿ: ಅನಾಥವಾದ ಒಂದೂವರೆ ತಿಂಗಳ ಮಗು 

ಹುಬ್ಬಳ್ಳಿ: ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿ ಪತಿ ಪರಾರಿಯಾಗಿರುವಂತಹ ಘಟನೆ ನೇಕಾರ ನಗರದಲ್ಲಿ ನಡೆದಿದೆ. ಸುಧಾ ಹಿರೇಮಠ(20) ಹತ್ಯೆಗೊಳದಾಗ ಪತ್ನಿ. ಶಿವಯ್ಯ ಕೊಲೆ ಮಾಡಿದ ಪತಿ. ದಂಪತಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಪರಾರಿ ಆಗಿದ್ದು, ಒಂದೂವರೆ ತಿಂಗಳ ಮಗು ಅನಾಥವಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:30 pm, Mon, 3 July 23

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!