ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ

ಶಿವಮೊಗ್ಗ ಹೊರವಲಯದ ಸೋಮಿನಕೊಪ್ಪದ ಪ್ರಾರ್ಥನಾ ಮಂದಿರ ಎದುರು ಆಟೋಚಾಲಕನ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
Follow us
|

Updated on:May 15, 2023 | 1:44 PM

ಶಿವಮೊಗ್ಗ: ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲು ಮತ್ತು ನಂತರ ರಾಜ್ಯದಲ್ಲಿ ಅನೇಕ ಗಲಾಟೆಗಳು ನಡೆಯುತ್ತಿವೆ. ಅದರಂತೆ ಈಗ ಶಿವಮೊಗ್ಗ (Shivamogga) ಹೊರವಲಯದ ಸೋಮಿನಕೊಪ್ಪದ ಪ್ರಾರ್ಥನಾ ಮಂದಿರ ಎದುರು ಆಟೋಚಾಲಕನ (Auto Driver) ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹರೀಶ್ ರಾವ್ ಗೋರ್ಪಡೆ ಹಲ್ಲೆಗೊಳಗಾದ ಆಟೋ ಚಾಲಕ. ಆಟೋ ಚಾಲಕ “ಬಿಜೆಪಿಗೆ (BJP) ಮತ ಹಾಕಿದಕ್ಕೆ” ಅನ್ಯಕೋಮಿನ ಕಿಡಿಗೇಡಿಗಳು ಕೈಯಿಂದ ಗುದ್ದಿ, ಕಲ್ಲಿನಿಂದ ಆಟೋಗೆ ಹೊಡೆದಿದ್ದಾರೆ ಎಂದು ಎಸ್​​ಪಿ ಕಚೇರಿಗೆ ಬಂದು ಹರೀಶ್ ರಾವ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಘಟನೆ ವಿವರ ತಿಳಿದು ಹರೀಶ್ ರಾವ್​ ಅವರಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಧನಸಹಾಯ ಮಾಡಿದ್ದಾರೆ. ಇನ್ನು ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೆಎಸ್ ಈಶ್ವರಪ್ಪ ಎಸ್ಪಿಗೆ ಮನವಿ ಮಾಡಿದ್ದಾರೆ.

ಹೊಸಕೋಟೆಯಲ್ಲಿ ಬಿಜೆಪಿ ಮುಖಂಡನ ಕೊಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಭಾರಿ ಕೂಡ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ  ಅವರು ಎಂಟಿಬಿ ನಾಗರಾಜ್  ಅವರ ವಿರುದ್ದ ಎರಡನೆ ಭಾರಿಗೆ ಗೆದ್ದು ಬೀಗಿದ್ದಾರೆ.  ಮೇ 13ರಂದು ರಿಸಲ್ಟ್‌ ಬರ್ತಿದ್ದಂತೆ ರಾತ್ರಿ ಇದೇ ವಿಚಾರವಾಗಿ ಹೊಸಕೋಟೆ ತಾಲೂಕಿನ ಡಿ ಶೆಟ್ಟಿಹಳ್ಳಿಯಲ್ಲಿ ಕೃಷ್ಣಪ್ಪ ಹಾಗೂ ಗಣೇಶಪ್ಪ ಅನ್ನೋ ಸಹೋದರರ ನಡುವೆ ಗಲಾಟೆಯಾಗಿತ್ತು. ನೀನು ಪಕ್ಷದಲ್ಲಿ ಇದ್ದುಕೊಂಡೇ ಬಿಜೆಪಿಗೆ ಮೋಸ ಮಾಡಿದ್ದೀಯಾ ಅಂತ ಎಂಟಿಬಿ ಬೆಂಬಲಿಗ ಕೃಷ್ಣಪ್ಪ ತನ್ನ ಸಹೋದರನನ್ನು ಪ್ರಶ್ನಿಸಿದ್ದ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿದ್ದು, ಗಣೇಶಪ್ಪನ ಮಗ ಆದಿತ್ಯಾ ಮತ್ತು ಕೆಲವರು ಕೃಷ್ಣಪ್ಪನ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು. ಕುಡುಗೋಲಿನಿಂದ ಅಟ್ಯಾಕ್‌ ಮಾಡಿದ್ದರು. ಇದರಿಂದ ಗಾಯಗೊಂಡ ಕೃಷ್ಣಪ್ಪನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಬದುಕುಳಿಯಲಿಲ್ಲ.

ಇನ್ನು ಹೋಸಕೋಟೆ ತಾಲೂಕಿನ ಕೊಡಹಳ್ಳಿ ಕುರುಬರಹಳ್ಳಿ, ಶಿವನಾಪುರ, ತಮ್ಮರಸನಹಳ್ಳಿ, ನೆರಗನಹಳ್ಳಿ ಸೇರಿದಂತೆ ಹಲವಡೆ ಶರತ್ ಬಚ್ಚೇಗೌಡ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಾ ಎಂಟಿಬಿ ಬೆಂಬಲಿಗರ ಮನೆಗಳ ಮುಂದೆ ಪಟಾಕಿ ಸಿಡಿಸಿದ್ದರು. ಈ ವೇಳೆ ಮನೆ ಕಾಂಪೌಂಡ್‌ ಒಳಗೂ ಕೂಡ ಪಟಾಕಿ ಸಿಡಿಸಿದ್ದರಂತೆ. ಹೀಗಾಗಿ ಮನೆ ಮುಂದೆ ಪಟಾಕಿ ಸಿಡಿಸಬೇಡಿ ಅಂತ ಹೇಳಿದಕ್ಕೆ, ಗಲಾಟೆಯಾಗಿದೆ. ಇದರಿಂದ ಕೆರಳಿದ ಎಂಟಿಬಿ ಬೆಂಬಲಿಗರು ನಂದಗುಡಿ ಪೊಲೀಸ್ ಠಾಣೆ ಮುಂದೆ ಕೃಷ್ಣಪ್ಪನ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Mon, 15 May 23

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ