Karnataka Assembly Election: ಬಿಜೆಪಿ ಎಂಎಲ್​ಸಿ ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ

ರಾಜ್ಯ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್​ ಸಿಗದೆ ಇದ್ದವರು ಒಬ್ಬೊಬ್ಬರಾಗಿ ಪಕ್ಷ ತೊರೆಯುತ್ತಿದ್ದಾರೆ. ಅದರಂತೆ ಇದೀಗ ಬಿಜೆಪಿ ಎಂಎಲ್​ಸಿ ಆಯನೂರು ಮಂಜುನಾಥ್ ಜೆಡಿಎಸ್​ಗೆ ಸೇರ್ಪಡೆಯಾಗಿದ್ದಾರೆ.

Karnataka Assembly Election: ಬಿಜೆಪಿ ಎಂಎಲ್​ಸಿ ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ
ಆಯನೂರು ಮಂಜುನಾಥ್​

Updated on: Apr 19, 2023 | 2:09 PM

ಚಿತ್ರದುರ್ಗ/ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್​ ಸಿಗದೆ ಇದ್ದವರು ಒಬ್ಬೊಬ್ಬರಾಗಿ ಪಕ್ಷ ತೊರೆಯುತ್ತಿದ್ದಾರೆ. ಅದರಂತೆ ಇದೀಗ ಬಿಜೆಪಿ ಎಂಎಲ್​ಸಿ (MLC) ಆಯನೂರು ಮಂಜುನಾಥ್(Ayanur Manjunath)​ ಜೆಡಿಎಸ್​(JDS)ಗೆ ಸೇರ್ಪಡೆಯಾಗಿದ್ದಾರೆ. ಇಂದು(ಏ.19) ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಬಾವುಟ ಕೊಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ಬಿ ಫಾರಂ ನೀಡುವ ಮೂಲಕ ಶಿವಮೊಗ್ಗ ಕ್ಷೇತ್ರದಿಂದಲೇ ಕಣಕ್ಕಿಯಲು ಆಯನೂರು ಮಂಜುನಾಥ್ ಸಜ್ಜಾಗಿದ್ದು, ಸಂಜೆ 4ಕ್ಕೆ ಆಯನೂರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಜೊತೆಗೆ ನಾಳೆ(ಏ.20) ಜೆಡಿಎಸ್ ಅಭ್ಯ ರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಶಿವಮೊಗ್ಗದಲ್ಲಿಂದು ಬೆಳ್ಳಂಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಆಯನೂರು ಮಂಜುನಾಥ್, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಮಧ್ಯಾಹ್ನದ ಬಳಿಕ ತಿಳಿಸುವೆ ಎಂದು ಹೇಳಿದ್ದರು.

ಇದನ್ನೂ ಓದಿ:ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ ಎಂಟ್ರಿ? ತಾತನ ಸ್ಫೂರ್ತಿ..ಅಪ್ಪನ ಕನಸು..ಧವನ್ ರಾಕೇಶ್ ಹೇಳಿದ್ದೇನು?

ಇನ್ನು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವೆ. ಟಿಕೆಟ್​ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ. ಈಶ್ವರಪ್ಪ ಕಣದಲ್ಲಿ ಇದ್ದರೆ. ನಾನು ಕೊಡುವ ಲೆಕ್ಕ ತುಂಬಾ ಇದೆ. ಆ ಲೆಕ್ಕ ಈ ಚುನಾವಣೆಯಲ್ಲಿ ಕೊಡುತ್ತೇನೆ. ಯಡಿಯೂರಪ್ಪ ಪರ ಹೇಳಿಕೆ ನೀಡಿದ ಏಕೈಕ ವ್ಯಕ್ತಿ ನಾನು. ಅವರ ಮೇಲೆ ಆರೋಪ ಸಮಸ್ಯೆಗಳು ಬಂದಾಗ ನಾನೇ ಒಬ್ಬನೇ ಅವರ ಪರ ಉತ್ತರ ಕೊಟ್ಟಿದ್ದೆ. ಮಹಾನಗರ ಪಾಲಿಕೆ ಕಮೀಷನ್ ದಂಧೆ ಬಗ್ಗೆ ಯಾರು ಧ್ವನಿ ಎತ್ತಲಿಲ್ಲ ಎಂದು ಪರೋಕ್ಷವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ