ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆ. 23ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ

| Updated By: ಸುಷ್ಮಾ ಚಕ್ರೆ

Updated on: Feb 21, 2022 | 7:13 PM

ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಇಂದು ಮಧ್ಯಾಹ್ನ KSRP ಪೊಲೀಸ್ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಪೊಲೀಸ್ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆ. 23ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ
ಶಿವಮೊಗ್ಗದಲ್ಲಿ ಪೊಲೀಸ್ ಬಂದೋಬಸ್ತ್
Follow us on

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳದ (Bajarangadal) ಕಾರ್ಯಕರ್ತನ ಹತ್ಯೆ ಪ್ರಕರಣ ಇಡೀ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹತ್ಯೆಯನ್ನು ಖಂಡಿಸಿ ಫೆ. 23ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಬಜರಂಗದಳ ಸಂಘಟನೆ ಕರೆ ನೀಡಿದೆ. ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣವನ್ನು ವಿರೋಧಿಸಿ ಬುಧವಾರ ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಯಲಿದೆ. ಭಾನುವಾರ ರಾತ್ರಿ ಬಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನು ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು.

ಪೊಲೀಸ್ ವಾಹನಕ್ಕೆ ಬೆಂಕಿ:
ಕಳೆದ ವಾರ ಹಿಜಾಬ್ ಗಲಾಟೆಯಿಂದ ತೀವ್ರವಾಗಿ ಚರ್ಚೆಗೊಳಗಾಗಿದ್ದ ಶಿವಮೊಗ್ಗ ಇದೀಗ ಬಜರಂಗದಳದ ಕಾರ್ಯಕರ್ತನ ಹತ್ಯೆಯಿಂದ ಮತ್ತೆ ಸುದ್ದಿಯಲ್ಲಿದೆ. ಹಿಂದೂ ಕಾರ್ಯಕರ್ತನ ಹತ್ಯೆಯನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಶಿವಮೊಗ್ಗದಲ್ಲಿ ಗಲಾಟೆಯೆಬ್ಬಿಸಿದ್ದಾರೆ. ಇದರ ನಡುವೆ ಶಿವಮೊಗ್ಗದಲ್ಲಿ ಪೊಲೀಸ್​ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ಶಿವಮೊಗ್ಗದ ಗಾಡಿಕೊಪ್ಪದಲ್ಲಿ ಇಂದು ಮಧ್ಯಾಹ್ನ KSRP ಪೊಲೀಸ್ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಪೊಲೀಸ್ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬಜರಂಗದಳದ ಕಾರ್ಯಕರ್ತ ಹರ್ಷನ ಶವಯಾತ್ರೆ ವೇಳೆ ಕಲ್ಲು ತೂರಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಆ ಸಮಯದಲ್ಲಿ ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕಿತ್ತು. ಅದನ್ನೇ ಅವರು ಮಾಡಿದ್ದಾರೆ. ಈ ಘಟನೆಯಲ್ಲಿ ಪೊಲೀಸರು ಸಂಯಮದಿಂದ ವರ್ತಿಸಿದ್ದಾರೆ. ಒಂದು ವೇಳೆ ಫೈರ್ ಮಾಡಿದ್ದರೆ ಇನ್ನೊಂದು ನಾಲ್ಕು ಹೆಣ ಬೀಳುತ್ತಿತ್ತು. ನಮ್ಮ ಪೊಲೀಸರು ಆ ಕೆಲಸ ಮಾಡಲಿಲ್ಲ. ಇಂದು ನಡೆದ ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಗೆ ವಿವರಣೆ ಕೊಟ್ಟಿದ್ದೇನೆ. ಮತ್ತೆ ಸಭೆ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬಂಧಿತ ಮೂವರು ಆರೋಪಿಗಳು ಶಿವಮೊಗ್ಗದವರು ಎಂದು ತಿಳಿಸಿದ್ದಾರೆ.

ಭಾನುವಾರ ರಾತ್ರಿ 8.45ರ ವೇಳೆಗೆ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆ ಮಾಡಲಾಗಿತ್ತು. ಕಾರಿನಲ್ಲಿ ಬಂದಿದ್ದ 6 ಜನರು ಹರ್ಷನನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಹರ್ಷ ಕೂಡ ಪ್ರತಿದಾಳಿ ಮಾಡುವುದಕ್ಕೆ ಪ್ರಯತ್ನಿಸಿದ್ದರು. ಕಾರ್​​ನಲ್ಲಿ ನಾಲ್ಕು ಜನರು ಇದ್ದರು. ಅವರೆಲ್ಲರೂ ಸೇರಿ ಹರ್ಷನ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದರು.

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಆರಗ ಜ್ಞಾನೇಂದ್ರ ಮಾಹಿತಿ

ಬಜರಂಗದಳ ಕಾರ್ಯಕರ್ತ ಹರ್ಷ ಮೃತದೇಹ ಮೆರವಣಿಗೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ; ಮತ್ತೆ ಬಿಗು ವಾತಾವರಣ ನಿರ್ಮಾಣ

Shivamogga murder: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ! ಬೆಚ್ಚಿಬಿದ್ದ ಮಲೆನಾಡು ಜನ