Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ, 13 ಎಫ್​ಐಆರ್ ದಾಖಲು- ಎಸ್​ಪಿ ಮಾಹಿತಿ

ಇದುವರೆಗೆ 13 ಎಫ್​ಐಆರ್​ ದಾಖಲಾಗಿವೆ. ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ, 13 ಎಫ್​ಐಆರ್ ದಾಖಲು- ಎಸ್​ಪಿ ಮಾಹಿತಿ
ಬಜರಂಗದಳ ಕಾರ್ಯಕರ್ತ ಹರ್ಷ
Follow us
TV9 Web
| Updated By: ganapathi bhat

Updated on:Feb 22, 2022 | 6:41 PM

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್​ಐಆರ್​ ದಾಖಲಾಗಿವೆ. ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಎ1, ಎ2 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಯಿತು. ನಿನ್ನೆ ಗಲಾಟೆ ವೇಳೆ ಗಾಯಗೊಂಡಿದ್ದಾಗಿ 8 ಜನರಿಂದ ದೂರು ನೀಡಲಾಗಿದೆ. 18 ವಾಹನಗಳ ಮೇಲೆ ದಾಳಿ ನಡೆಸಿ ಬೆಂಕಿಯನ್ನೂ ಹಚ್ಚಿದ್ದಾರೆ. ಶಿವಮೊಗ್ಗದಲ್ಲಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹತ್ಯೆಯಾಗಿರುವ ಹರ್ಷನ ವಿರುದ್ಧ 2 ಪ್ರಕರಣ ದಾಖಲಾಗಿದ್ದವು. ಎ1, ಎ3, ಎ4, ಎ5 ಹರ್ಷನ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಎ2, ಎ6 ಹಂತಕರಿಗೆ ಸಹಕಾರ ನೀಡಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೆವು. 6 ಜನರ ಪಾತ್ರ ಕಂಡುಬಾರದ ಹಿನ್ನೆಲೆ ಬಿಟ್ಟು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

ಎ1 ಮೊಹಮ್ಮದ್ ಕಾಸಿಫ್, ಎ2 ಸೈಯದ್ ನದೀಮ್, ಎ3 ಆಸಿಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್​, ಎ5 ನಿಹಾನ್, ಎ6 ಅಬ್ದುಲ್ ಅಫ್ನಾನ್​ ಬಂಧಿಸಲಾಗಿದೆ. ಎಲ್ಲಾ 6 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಗಿದೆ. ಬಂಧಿತ 6 ಆರೋಪಿಗಳ ಪೈಕಿ ನಾಲ್ವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಭೆಯಲ್ಲಿ ಭಾಗಿಯಾಗಿದ್ದ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹರ್ಷ ಹತ್ಯೆ ಪ್ರಕರಣದಲ್ಲಿ ಕಾಸಿಫ್, ಸೈಯದ್ ನದೀಮ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಬಂಧಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಹೇಳಿದ್ದಾರೆ. ಈ ಮಧ್ಯೆ, ಶಿವಮೊಗ್ಗ ಬಿಜೆಪಿ ಕಚೇರಿಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್‌ ಮುಂದುವರಿಕೆ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆ, ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್‌ ಮುಂದುವರಿಕೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಶುಕ್ರವಾರ ಬೆಳಗ್ಗೆವರೆಗೂ 144 ಸೆಕ್ಷನ್‌ ಇರಲಿದೆ. ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. 144 ಸೆಕ್ಷನ್‌ ವಿಸ್ತರಣೆ ಬಗ್ಗೆ ಮುಂದೆ ತೀರ್ಮಾನಿಸಲಾಗುವುದು. ಪರಿಸ್ಥಿತಿ ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳುತ್ತೇವೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6-9 ಗಂಟೆವರೆಗೆ ಅವಕಾಶ ನೀಡುತ್ತೇವೆ. ಕೆಲವೆಡೆ 144 ಸೆಕ್ಷನ್ ಉಲ್ಲಂಘಿಸ್ತಿದ್ದಾರೆ, ಕ್ರಮ ಕೈಗೊಳ್ತೇವೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Shivamogga Violence Live: ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್​ ಮುಂದುವರಿಕೆ: ಶಾಲೆ ಕಾಲೇಜಿಗೆ ರಜೆ

ಇದನ್ನೂ ಓದಿ: ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡುತ್ತೇನೆ: ತಾಖತ್ ಇದ್ದರೆ ಅಟ್ಯಾಕ್ ಮಾಡಿ, ನಾವು ನೋಡಿಕೊಳ್ತೇವೆ -ರೇಣುಕಾಚಾರ್ಯ ಸವಾಲ್

Published On - 6:38 pm, Tue, 22 February 22

ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ