ವಿಧಾನ ಪರಿಷತ್ ಚುನಾವಣೆ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
MLC Elections: ಒಂದು ಸ್ಥಾನ ಗೆಲ್ಲುವಷ್ಟು ಸದಸ್ಯರು ನಮ್ಮ ಜತೆಗೆ ಇದ್ದಾರೆ. ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಮತ ವಿಭಜನೆ ಸಾಧ್ಯತೆ ಇದೆ. ಕಾಂಗ್ರೆಸ್, ಬಿಜೆಪಿ ಮಧ್ಯೆ ಮತ ವಿಭಜನೆ ಆಗಲಿದೆ ಎಂದು ಸತೀಶ್ ಹೇಳಿದ್ದಾರೆ.
ಬೆಳಗಾವಿ: ಡಿಸೆಂಬರ್ 10 ರಂದು ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆಸಲಾಗಿದೆ. ಈಗಾಗಲೇ ಕಾಂಗ್ರೆಸ್ ವರಿಷ್ಠರು ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಎರಡ್ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮ ಆಗಲಿದೆ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು (ನವೆಂಬರ್ 17) ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರಕಾಶ ಹುಕ್ಕೇರಿ, ಚನ್ನರಾಜ್ ಹಟ್ಟಿಹೊಳಿ, ವಿವೇಕರಾವ್ ಪಾಟೀಲ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಆಗಿದ್ದಾರೆ. ಜನಪ್ರಿಯ ಅಭ್ಯರ್ಥಿ ಆಯ್ಕೆಗೆ ಪ್ರಯತ್ನ ಮಾಡುತ್ತಿದ್ದೇವೆ. ಯಾರೇ ಅಭ್ಯರ್ಥಿಯಾದ್ರು ಗೆಲ್ಲಿಸುವ ಸಿದ್ಧತೆ ನಡೆಸಿದ್ದೇವೆ. ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಕಣಕ್ಕೆ ಇಳಿಯಲಿದ್ದಾರೆ. ಲಖನ್ ಜಾರಕಿಹೊಳಿ ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದಾರೆ. ಡಿಸೆಂಬರ್ 23ರ ನಂತರ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಒಂದು ಸ್ಥಾನ ಗೆಲ್ಲುವಷ್ಟು ಸದಸ್ಯರು ನಮ್ಮ ಜತೆಗೆ ಇದ್ದಾರೆ. ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಮತ ವಿಭಜನೆ ಸಾಧ್ಯತೆ ಇದೆ. ಕಾಂಗ್ರೆಸ್, ಬಿಜೆಪಿ ಮಧ್ಯೆ ಮತ ವಿಭಜನೆ ಆಗಲಿದೆ ಎಂದು ಸತೀಶ್ ಹೇಳಿದ್ದಾರೆ.
ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ನಿಂದ ಆರ್. ಪ್ರಸನ್ನ ಕುಮಾರ್, ವೈ.ಹೆಚ್. ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಇದೀಗ ಶಿವಮೊಗ್ಗ ಜಿಲ್ಲೆಯ 1 ಸ್ಥಾನಕ್ಕೆ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಯಾವ ಬಣ ರಾಜಕೀಯವೂ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಇದನ್ನೂ ಓದಿ: ನಾನು ಮಂತ್ರಿ ಆಗಿರುವಾಗ ನನ್ನ ಮಗ ಎಂಎಲ್ಸಿ, ಎಂಎಲ್ಎ ಆಗಬಾರದು; ಇದು ನನ್ನ ವೈಯಕ್ತಿಕ ನಿರ್ಧಾರವೆಂದ ಸಚಿವ ಈಶ್ವರಪ್ಪ
Published On - 3:52 pm, Wed, 17 November 21