ಆರ್ಥಿಕ ಸಂಕಷ್ಟ: ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನೇಣಿಗೆ ಶರಣು

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನಗರದ ದೇವಜ್ಞ ಕಲ್ಯಾಣ ಮಂಟಪ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರ್ಥಿಕ ಸಂಕಷ್ಟ: ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 06, 2023 | 11:38 AM

ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL factory) ಗುತ್ತಿಗೆ ಕಾರ್ಮಿಕ ನಗರದ ದೇವಜ್ಞ ಕಲ್ಯಾಣ ಮಂಟಪ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೇತನ್​ಕುಮಾರ್(32) ಮೃತ ವ್ಯಕ್ತಿ. ಆರ್ಥಿಕ ಮುಗ್ಗಟ್ಟಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳಿಂದ ವಿಐಎಸ್​ಎಲ್ ಕಾರ್ಖಾನೆ ಮುಚ್ಚುವ ಭೀತಿ ಎದುರಾಗಿದೆ. ಇದರಿಂದ ಗುತ್ತಿಗೆ ಕಾರ್ಮಿಕ ವಲಯದಲ್ಲಿ ಆರ್ಥಕ ಸಂಕಷ್ಟ ಎದುರಾಗಿದೆ. ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ

ರಸ್ತೆ ಅಪಘಾತದಲ್ಲಿ ಆರ್​ಟಿಒ ಸಿಬ್ಬಂದಿ ಸಾವು

ರಾಯಚೂರು: ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಆರ್​ಟಿಒ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ಆರ್​ಟಿಒ ಸರ್ಕಲ್ ಸಮೀಪ ನಡೆದಿದೆ. ಆರ್​ಟಿಒ ಕಂಪ್ಯೂಟರ್ ಆಪರೇಟರ್ ಚಂದ್ರಕಾಂತ್(34) ಮೃತ ದುರ್ದೈವಿ. ಬೈಕ್​ನ ಹಿಂಬದಿ ಸವಾರ ನಿಲೇಶ್​ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕಾರ್ಪಿಯೋ ವಾಹನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಾರಕಾಸ್ತ್ರದಿಂದ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ, ಆರೋಪಿ ಮೇಲೆ ಫೈರಿಂಗ್‌

ಚಂದ್ರಕಾಂತ್ ಬೈಕ್​​ನಲ್ಲಿ ಆರ್​ಟಿಓ ಸರ್ಕಲ್​ನಿಂದ ಬಿಆರ್​ಬಿ ಸರ್ಕಲ್ ಕಡೆ ಹೊರಟಿದ್ದರು. ಈ ವೇಳೆ ಸ್ಕಾರ್ಪಿಯೋ ವಿರುದ್ಧ ದಿಕ್ಕಿನಲ್ಲಿ ಆರ್​ಟಿಓ ಸರ್ಕಲ್ ಕಡೆ ಬರುತ್ತಿತ್ತು. ಈ ಸಮಯದಲ್ಲಿ ಸ್ಕಾರ್ಪಿಯೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಚಂದ್ರಕಾಂತ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೈಸೂರು: ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದ ಬಸ್ ನಿಲ್ದಾಣದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಗಂಧನಹಳ್ಳಿ ಗ್ರಾಮದ ನಿವಾಸಿ ಅರುಣ್ ಕುಮಾರ್ ಮೃತ ದುರ್ದೈವಿ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Mon, 6 February 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ