ಬೈಕ್ ಅಪಘಾತದಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು

ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್​ನಲ್ಲಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ ಅಪಘಾತದಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು
ಬಿ.ಕೆ.ಸಂಗಮೇಶ್
Follow us
TV9 Web
| Updated By: ಆಯೇಷಾ ಬಾನು

Updated on:Dec 26, 2023 | 6:49 AM

ಶಿವಮೊಗ್ಗ, ಡಿ.26: ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಬೈಕ್ ಅಪಘಾತ (Accident) ಸಂಭವಿಸಿದೆ. ಘಟನೆಯಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ (BK Sangamesh) ಅವರ ಪಿಎ ಈಶ್ವರ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್​ನಲ್ಲಿದ್ದ ಶಾಸಕರ ಆಪ್ತ ಸಹಾಯಕ ಈಶ್ವರ ಪ್ರಾಣಬಿಟ್ಟಿದ್ದಾರೆ.

ಜಮೀನು ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಜಮೀನು ವಿಚಾರಕ್ಕೆ ಶುರುವಾದ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ತುಮಕೂರು ಹೊರವಲಯದ ಬೆತ್ತಲೂರಿನಲ್ಲಿ ಘಟನೆ ನಡೆದಿದ್ದು, ನಿರಂಜನ್ ಎಂಬಾತ ಕೊಲೆಯಾದ ದುರ್ದೈವಿ. ನಿನ್ನೆ ಕ್ರಿಸ್​ಮಸ್ ಹಿನ್ನೆಲೆಯಲ್ಲಿ ಮಧು ಹಾಗೂ ನಿರಂಜನ್ ಪಾರ್ಟಿ ಮಾಡ್ತಿದ್ರು. ಆಗ ಇಬ್ಬರ ನಡುವೆ ಗಲಾಟೆ ಶುರುವಾಗಿತ್ತು. ಮಾರಕಾಸ್ತ್ರಗಳಿಂದ ಕೊಚ್ಚಿ ನಿರಂಜನ್ ಹತ್ಯೆಗೈದಿದ್ದು, ಆರೋಪಿ ಮಧು & ಆತನ ಸಹಚರರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು.

ಇದನ್ನೂ ಓದಿ: ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕರ ದುರ್ಮರಣ

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರ ದುರ್ಮರಣಕ್ಕಿಡಾಗಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗಾಳಪೂಜಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಗರಾಜ ಮಾರುತಿ ಮತ್ತು ಹೇಮಂತ್ ಮಾಲತೇಶ್ ಸಾವನ್ನಪ್ಪಿದ್ದಾರೆ. ಈಜಲು ಬರದಿದ್ದರೂ ಕೆರೆಗೆ ಇಳಿದು ಬಾಲಕರು ಮೃತಪಟ್ಟಿದ್ದಾರೆ. ಮೃತರ ಮನೆಗೆ ಮಾಜಿ ಶಾಸಕ ವಿರೂಪಾಕ್ಷಪ್ಪ ಭೇಟಿ ನೀಡಿ, ಸಾಂತ್ವನ ಹೇಳಿದ್ರು. ಇನ್ನೂ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡ್ತಿದೆ. ನಿನ್ನೆ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನದ ಬಳಿ ಹಿಂದೂ ಕಾರ್ಯಕರ್ತರು, ಭಿನ್ನಕೋಮಿನ ವಿದ್ಯಾರ್ಥಿಗಳನ್ನು ತಡೆದು ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆ. ಉಳ್ಳಾಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳನ್ನು ತಡೆದ ಗಲಾಟೆ ಮಾಡಿದ್ದಾರೆ. ಭಿನ್ನಕೋಮಿನ ಯುವಕನ ಜತೆಯಿದ್ದ ಯುವತಿಯನ್ನು ತಡೆದು ಪ್ರಶ್ನಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿ ಮಾಹಿತಿ ಪಡೆದು ಉಳ್ಳಾಲ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:48 am, Tue, 26 December 23