AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೇನೇ ಹೇಳಿದರೂ ರಾಜ್ಯಾಧ್ಯಕ್ಷನಾಗಿ ಜನ ನನ್ನ ಒಪ್ಪಿದ್ದಾರೆ; ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ತಿರುಗೇಟು

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾಯಕತ್ವ ವಹಿಸಲು ವಿಜಯೇಂದ್ರ ಇನ್ನೂ ಜೂನಿಯರ್. ಆತನನ್ನು ನಾನು ಒಪ್ಪುವುದಿಲ್ಲ. ಅವರನಿಗೆ ಯಾವುದೇ ಐಡಿಯಾಲಜಿ ಇಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ.

ಯಾರೇನೇ ಹೇಳಿದರೂ ರಾಜ್ಯಾಧ್ಯಕ್ಷನಾಗಿ ಜನ ನನ್ನ ಒಪ್ಪಿದ್ದಾರೆ; ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ತಿರುಗೇಟು
ಬಿ.ವೈ. ವಿಜಯೇಂದ್ರ
Basavaraj Yaraganavi
| Edited By: |

Updated on:Sep 16, 2024 | 9:11 PM

Share

ಶಿವಮೊಗ್ಗ: ‘ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ನಾನು ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದು ಅಸಮಾಧಾನ ಹೊರಹಾಕಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಯಾರು ಏನೇ ಹೇಳಿದರೂ ಕಾರ್ಯಕರ್ತರು ನನ್ನನ್ನು ಒಪ್ಪಿದ್ದಾರೆ. ನಾನು ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

ಯಾರು ಏನೇ ಮಾತನಾಡಿದರೂ ವಿಜಯೇಂದ್ರನಾದ ನಾನೇ ರಾಜ್ಯಾಧ್ಯಕ್ಷ ಎಂಬುದಂತೂ ಸತ್ಯ. ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪಕ್ಷದ ಹೈಕಮಾಂಡ್. ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ, ಜೆ.ಪಿ. ನಡ್ಡಾ ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷ ಎಂದು ಘೋಷಿಸಿದವರು ಎಂದು ಬಿ.ವೈ ವಿಜಯೇಂದ್ರ ಶಿವಮೊಗ್ಗದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ಭ್ರಷ್ಟ, ಆತನ ನಾಯಕತ್ವಕ್ಕೆ ನನ್ನ ವಿರೋಧ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ:

ಇದೇ ವೇಳೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದಿದೆ. ಪೆಟ್ರೋಲ್​ ಬಾಂಬ್​ ಹಾಕಿ ಅಂಗಡಿಗಳನ್ನ ಸುಟ್ಟು ಹಾಕಿದ್ದಾರೆ. ಪಾಂಡವಪುರದಲ್ಲಿನ ಆರ್​ಎಸ್​ಎಸ್​ ಕಚೇರಿ ಮೇಲೆ ಪೊಲೀಸರ ದಾಳಿ ನಡೆದಿದೆ. ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸರು ಹೀಗೆ ಮಾಡುತ್ತಿದ್ದಾರೆ. ಇದು ರಣಹೇಡಿ ಸರ್ಕಾರ ಎಂದು ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಗಲಭೆ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ

ಇಂದು ಬೆಳಗಾವಿಯಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ಅಸಮಾಧಾನ ಹೊರಹಾಕಿದ್ದರು.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Mon, 16 September 24