Shivamogga Violence: ಹಿಂದೂ ಸಮಾಜ ಎದ್ದರೆ ಮುಸ್ಲಿಂ ಗೂಂಡಾಗಳು ಉಳಿಯಲ್ಲ: ಈಶ್ವರಪ್ಪ
KS Eshwarappa: ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ನಗರದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರನ್ನು ಭೇಟಿಯಾಗಿ ಶಿವಮೊಗ್ಗದ ಬೆಳವಣಿಗೆಗಳನ್ನು ವಿವರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ನಾನು ಎಲ್ಲ ಮುಸ್ಲಿಮರೂ ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳುತ್ತಿದ್ದಾರೆ. ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ. ಶಿವಮೊಗ್ಗ ಗಲಭೆಗೆ ಕಾಂಗ್ರೆಸ್ ಕಾರ್ಪೊರೇಟರ್ ಗಂಡನೇ ಕಾರಣ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳುತ್ತಿದ್ದಾರೆ. ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ. ಶಿವಮೊಗ್ಗ ಗಲಭೆಗೆ ಕಾಂಗ್ರೆಸ್ ಕಾರ್ಪೊರೇಟರ್ ಗಂಡನೇ ಕಾರಣ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: Shivamogga Violence: ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ; ಪ್ರಮುಖ ಆರೋಪಿಯ ಮೇಲೆ ಪೊಲೀಸರ ಫೈರಿಂಗ್
ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್ಡಿಪಿಐ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು ಎಂದು ಹೇಳಿದರು.
ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಸ್ಗೆ ಚಾಕು ಹಾಕಿದರು. ಅವರ ನರಗಳು ಘಾಸಿಯಾಗಿರುವುದರಿಂದ ಉಳಿಯುವುದು ಕಷ್ಟ ಎನ್ನುತ್ತಿದ್ದಾರೆ. ಪೊಲೀಸರು ಬಹಳ ಶ್ರಮದಿಂದ ಅಪರಾಧಿಗಳನ್ನು ಹುಡುಕುತ್ತಿದ್ದಾರೆ. ಈ ವೇಳೆ ಒಬ್ಬನ ಮೇಲೆ ಗುಂಡು ಹಾರಿಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: ಶಿವಮೊಗ್ಗ: ಪ್ರೇಮ್ ಸಿಂಗ್ ಇರಿತ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ: ಅಲೋಕ್ ಕುಮಾರ್, ಎಡಿಜಿಪಿ
ಕರ್ನಾಟಕದಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಎಸ್ಡಿಪಿಐ ಸಂಘಟನೆಯ ಮನೋಭಾವ ಇಂದಿಗೂ ಬದಲಾಗಿಲ್ಲ. ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಗೆ ಅವರು ಬಂದಿದ್ದಾರೆ. ನಮ್ಮ ಶಿವಮೊಗ್ಗದವರು ಶಾಂತಿಪ್ರಿಯರು. ಅಲ್ಲಿನ ಸ್ಥಳೀಯರ ಮುಸ್ಲಿಮರ ಬಗ್ಗೆ ನಮಗೆ ಆಕ್ಷೇಪವಿಲ್ಲ. ಆದರೆ ಕೊಲೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡುವ ಪ್ರಕರಣಗಳು ಎಲ್ಲಿಯೂ ಆಗಬಾರದು ಎಂದು ಒತ್ತಾಯಿಸಿದರು.
ಇಂಥ ಸಂದರ್ಭದಲ್ಲಿ ಸರ್ಕಾರ ಹೇಗೆ ವರ್ತಿಸಲಿದೆ ಎಂದು ಪೊಲೀಸರು ನಿನ್ನೆ ಒಂದು ಉದಾಹರಣೆ ತೋರಿಸಿದ್ದಾರೆ. ಮುಸ್ಲಿಮ್ ಸಮಾಜದ ಪ್ರಮುಖರು ತಮ್ಮ ಸಮುದಾಯದ ಯುವಕರಿಗೆ ಬುದ್ಧಿ ಹೇಳಬೇಕು. ಈ ಘಟನೆಗೆ ಮುಖ್ಯ ಕಾರಣವಾಗಿರುವ ಎಸ್ಡಿಪಿಐ ಕಾರ್ಯಕರ್ತ ಶಿವಮೊಗ್ಗದ ಕಾಂಗ್ರೆಸ್ ಪಾಲಿಕೆ ಸದಸ್ಯೆಯ ಪತಿ. ಶಿವಮೊಗ್ಗ ಗಲಭೆಯ ಹಿಂದೆ ಕಾಂಗ್ರೆಸ್ ಇದೆ ಎಂದು ನೇರವಾಗಿ ಆರೋಪ ಮಾಡಿದರು.
ಗಣಪತಿ ಉತ್ಸವದ ವೇಳೆ ರಾಜ್ಯದಲ್ಲಿ ಎಲ್ಲಿಯೇ ಗಲಭೆ ನಡೆದರೂ, ಮುಸ್ಲಿಮರು ಹಿಂದೂಗಳ ಆಚರಣೆಗೆ ಅಡ್ಡಿಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಈಶ್ವರಪ್ಪ ಎಚ್ಚರಿಸಿದರು. ‘ನೀವು ನಿಮ್ ಹಬ್ಬ ಮಾಡಲ್ವಾ? ನಾವು ಬೆಂಬಲ ಕೊಡಲ್ವಾ? ನಮ್ ಹಬ್ಬದ ತಂಟೆಗೆ ಬರಬೇಡಿ’ ಎಂದು ತಾಕೀತು ಮಾಡಿದರು.
Published On - 11:05 am, Tue, 16 August 22