ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಈಶ್ವರಪ್ಪ, ಆಸ್ತಿ ಎಷ್ಟಿದೆ ಗೊತ್ತಾ?

KS Eshwarappa Asset Details:: ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 26 ಕ್ಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಮೂರು ಪಕ್ಷಗಳಿಂದಲೂ ಪ್ರಚಾರದ ಭರಾಟೆ ತಾರಕಕ್ಕೇರಿದೆ. ಇದರ ನಡುವೆ ಕರ್ನಾಟಕದ ಉಳಿದ 14 ಕ್ಷೇತ್ರಗಳ ಮತದಾನಕ್ಕೆ 2ನೇ ಹಂತದ ನಾಮಪತ್ರ ಸಲ್ಲಿಕೆ ಭರಾಟೆ ಇಂದಿನಿಂದ ಶುರುವಾಗಿದ್ದು, ಮೊದಲ ದಿನವೇ ಘಟಾನುಘಟಿ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕ್ಷೇತರ ಅಭ್ಯರ್ಥಿಯಾಗಿ ಕೆಎಸ್​ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಹಾಗಾದ್ರೆ, ಇವರ ಆಸ್ತಿ ಎಷ್ಟಿದೆ? ಎನ್ನುವ ವಿವರ ಇಲ್ಲಿದೆ.

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಈಶ್ವರಪ್ಪ, ಆಸ್ತಿ ಎಷ್ಟಿದೆ ಗೊತ್ತಾ?
ನಾಮಪತ್ರ ಸಲ್ಲಿಸಿದ ಈಶ್ವರಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 12, 2024 | 6:04 PM

ಶಿವಮೊಗ್ಗ, (ಏಪ್ರಿಲ್ 12): ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ (Lok Sabha Election 2024) ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ(KS Eshwarappa), ಇದೀಗ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ(Shivamogga) ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇಂದು(ಏಪ್ರಿಲ್ 12) ತಮ್ಮ ಅಪಾರ ಬೆಂಬಲಿರೊಂದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ವರೆಗೆ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಇನ್ನು ಈಶ್ವರಪ್ಪ ಅವರು ಒಟ್ಟು ಆಸ್ತಿ ಮೌಲ್ಯ 98 ಕೋಟಿ 92 ಲಕ್ಷದ 20 ಸಾವಿರ ಇದೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಅಲ್ಲದೇ ತಮ್ಮ ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ 35 ಕೋಟಿ 50 ಲಕ್ಷದ 20 ಸಾವಿರ ಮೌಲ್ಯದ ಆಸ್ತಿ ಇದೆ ಎಂದು ಅಫಿಡೆವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ.

ಈಶ್ವರಪ್ಪ ದಂಪತಿ ಬಳಿ ಏನೇನಿದೆ?

ಈಶ್ವರಪ್ಪ ಬಳಿ ಇರುವ ನಗದು 25 ಲಕ್ಷ, ಪತ್ನಿ ಬಳಿ 2 ಲಕ್ಷ ರೂ. ನಗದು ಇದೆ. ಇನ್ನು ಈಶ್ವರಪ್ಪ ಬಳಿ 300 ಗ್ರಾಂ ಚಿನ್ನ, ಎರಡು ಕೆ.ಜಿ ಬೆಳ್ಳಿ ಆಭರಣಗಳು ಇದ್ದರೆ, ಅವರ ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ 500 ಗ್ರಾಂ ಚಿನ್ನ, ಕೆ.ಜಿ 5 ಬೆಳ್ಳಿ ಆಭರಣಗಳಿವೆ. ನಿದಿಗೆ ಗ್ರಾಮ ಬಳಿ 1 ಎಕರೆ 31 ಗುಂಟೆ ಕೃಷಿ ಭೂಮಿ ಇದೆ. ಇನ್ನು 4 ಎಕರೆ 24 ಗುಂಟೆ ಕೃಷಿಯೇತರ ಭೂಮಿ ಈಶ್ವರಪ್ಪ ಹೆಸರಿನಲ್ಲಿದೆ. ಹಾಗೇ ಬೆಂಗಳೂರಿನ‌ ಜಯನಗರದಲ್ಲಿ ನಿವೇಶನ, ಶಿವಮೊಗ್ಗದಲ್ಲಿ ವಾಸದ ಮನೆ ಹೊಂದಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ನಾಮಪತ್ರ ಮೆರವಣಿಗೆಯಲ್ಲಿ ಮಿಂಚಿದ ಜೂನಿಯರ್ ಮೋದಿ, ಏನಂದ್ರು ಗೊತ್ತಾ?

ಈಶ್ವರಪ್ಪ ಹೆಸರಿನಲ್ಲಿರುವ ಚರಾಸ್ತಿ ಮೌಲ್ಯ 4 ಕೋಟಿ 28 ಲಕ್ಷದ 61 ಸಾವಿರ. ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 3 ಕೋಟಿ 77 ಲಕ್ಷದ 34 ಸಾವಿರ. ಈಶ್ವರಪ್ಪ ಹೆಸರಿನಲ್ಲಿರುವ ಸ್ಥಿರಾಸ್ತಿ ಮೌಲ್ಯ 10 ಕೋಟಿ 95 ಲಕ್ಷದ 59 ಸಾವಿರ. ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ ಸ್ಥಿರಾಸ್ತಿ ಮೌಲ್ಯ 7 ಲಕ್ಷದ 31 ಸಾವಿರ ರೂಪಾಯಿ.

ಇನ್ನು ಈಶ್ವರಪ್ಪ ಹೆಸರಿನಲ್ಲಿ 5 ಕೋಟಿ 87 ಲಕ್ಷದ 39 ಸಾವಿರ ರೂಪಾಯಿ ಸಾಲ ಇದ್ದರೆ, ಅವರ ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ 70 ಲಕ್ಷದ 80 ಸಾವಿರದ 13 ಸಾವಿರ ಸಾಲ ಇದೆ ಎಂದು ನಾಮಪತ್ರದ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ