ವೀಕೆಂಡ್ ಕರ್ಫ್ಯೂ ನಡುವೆಯೂ ಬಿಜೆಪಿ ಶಾಸಕ ಅಶೋಕ್ ನಾಯ್ಕ್ ಒಡೆತನದ ಕಾಲೇಜ್ ಓಪನ್
ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಒಡೆತನದ ಅಕ್ಷರ ಕಾಲೇಜು ತೆರೆಯಲಾಗಿದ್ದು, ಕಾಲೇಜು ಬಸ್ನಲ್ಲಿ ವಿದ್ಯಾರ್ಥಿಗಳು ತೆರಳುತ್ತಿರುವ ದೃಶ್ಯ ಟಿವಿ9 ಡಿಜಿಟಲ್ಗೆ ಲಭ್ಯವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ್ದಾಗ ವಿದ್ಯಾರ್ಥಿಗಳಿಗೆ ಇಂದು ಲಸಿಕೆ ನೀಡುವ ಉದ್ದೇಶದಿಂದ ಕಾಲೇಜ್ ತೆರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗ: ಕೊರೊನಾ ಹಿನ್ನೆಲೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ (Weekend Curfew) ಜಾರಿ ಮಾಡಲಾಗಿದೆ. ನಿನ್ನೆ (ಶುಕ್ರವಾರ) ಸಂಜೆ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಹೀಗಾಗಿ ಶಾಲೆ-ಕಾಲೇಜುಗಳು ತೆರೆಯದಂತೆ ಸರ್ಕಾರ ಆದೇಶ ಮಾಡಿದೆ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದ್ದು, ಕಾಲೇಜು ತೆರೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ ಒಡೆತನದ ಅಕ್ಷರ ಕಾಲೇಜು ತೆರೆಯಲಾಗಿದ್ದು, ಕಾಲೇಜು ಬಸ್ನಲ್ಲಿ ವಿದ್ಯಾರ್ಥಿಗಳು ತೆರಳುತ್ತಿರುವ ದೃಶ್ಯ ಟಿವಿ9 ಡಿಜಿಟಲ್ಗೆ ಲಭ್ಯವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ್ದಾಗ ವಿದ್ಯಾರ್ಥಿಗಳಿಗೆ ಇಂದು ಲಸಿಕೆ ನೀಡುವ ಉದ್ದೇಶದಿಂದ ಕಾಲೇಜ್ ತೆರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೊನಾ ಲಸಿಕೆ ಪಡೆದ ವಿದ್ಯಾರ್ಥಿನಿ ಆರೋಗ್ಯದಲ್ಲಿ ಏರುಪೇರು
ಶಿವಮೊಗ್ಗದ ಶಾಸಕರ ಒಡೆತನದ ಅಕ್ಷರ ಕಾಲೇಜಿನಲ್ಲಿ ಲಸಿಕೆ ಪಡೆದ ನಂತರ ವಿದ್ಯಾರ್ಥಿನಿ ಹರ್ಷಿತಾ ತಲೆ ಸುತ್ತಿಬಿದ್ದಿದ್ದಾಳೆ. ವೈದ್ಯ ಡಾ.ರಾಜೇಂದ್ರ, ನರ್ಸ್ಗಳಿಂದ ಆರೋಗ್ಯ ತಪಾಸಣೆ ನಡೆಸಿದ್ದು, ಬೆಳಿಗ್ಗೆ ವಿದ್ಯಾರ್ಥಿನಿ ಸರಿಯಾಗಿ ತಿಂಡಿ ತಿನ್ನದೇ ಇದ್ದಿದ್ದರಿಂದ ತಲೆ ಸುತ್ತು ಬಂದಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಬೆಳಿಗ್ಗೆ ಶಾಲೆಯಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಿದ್ದರು. ಈ ಹಿನ್ನಲೆಯಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಶಾಲೆಗೆ ತಂದೆ ಬಿಟ್ಟು ಹೋದರು. ವ್ಯಾಕ್ಸಿನ್ ಪಡೆದ ಬಳಿಕ ತಲೆ ಸುತ್ತು ಬಂದು ಅಸ್ವಸ್ಥಗೊಂಡೆ. ಕೂಡಲೇ ನರ್ಸ್ ಮತ್ತು ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಿಪಿ ಸೇರಿದಂತೆ ಆರೋಗ್ಯ ತಪಾಸಣೆ ಮಾಡಿದರು. 15 ರಿಂದ 20 ನಿಮಿಷಗಳ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಇದನ್ನೂ ಓದಿ:
ಕೊರೊನಾಗೆ ಡೋಂಟ್ ಕೇರ್ ಎಂದ ಕೊಪ್ಪಳದ ಜನ! ಗುಂಪಾಗಿ ಕುಳಿತು ಮದ್ಯ ಸೇವನೆ
ಬೆಂಗಳೂರಿನಲ್ಲಿ ಕೊರೊನಾ ಅತಂಕ! ಶಾಲೆಗಳನ್ನ ಬಂದ್ ಮಾಡಲು ಆರ್ಕಿಡ್ ಇಂಟರ್ನ್ಯಾಷನಲ್ ಸಂಸ್ಥೆ ನಿರ್ಧಾರ