ಶಾಸಕ ಹಾಲಪ್ಪ ಆರೋಗ್ಯದಲ್ಲಿ ಮತ್ತೆ ಏರುಪೇರು, ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್

  • Publish Date - 8:51 pm, Mon, 7 September 20
ಶಾಸಕ ಹಾಲಪ್ಪ ಆರೋಗ್ಯದಲ್ಲಿ ಮತ್ತೆ ಏರುಪೇರು, ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್

ಇತ್ತೀಚಿಗಷ್ಟೇ ಕೊರೊನಾದಿಂದ ಗುಣಮುಖರಾಗಿದ್ದ ಹಾಲಪ್ಪ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಬೆಂಗಳೂರಿನ ಹೆಸರಾಂತ ಖಾಸಗಿ ಆಸ್ಪತ್ರೆಯೊಂದಕ್ಕೆ ಅವರನ್ನು ಶಿಫ್ಟ್ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಶಾಸಕರಾಗಿರುವ ಹಾಲಪ್ಪ, ಕೊವಿಡ್-19 ಸೋಂಕಿನಿಂದ ಚೇತರಿಸಿಕೊಂಡ ನಂತರ ಒಂದು ವಾರದಿಂದೀಚೆಗೆ ಕ್ಷೇತ್ರದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.

ಆದರಿಂದು ಹಾಲಪ್ಪ ಎದೆ ನೋವು, ಹೊಟ್ಟೆ ಉರಿ, ವಾಂತಿ ಬಗ್ಗೆ ದೂರಿದ ನಂತರ ಸಾಗರದ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಆಮೇಲೆ ವೈದ್ಯರ ಸಲಹೆ ಮೇರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ.

Click on your DTH Provider to Add TV9 Kannada