AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ

ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿನ ಈಶ್ವರಪ್ಪ ಅವರ ಬಂಡಾಯ ಇದೀಗ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು, ಈಶ್ವರಪ್ಪ ಇದೀಗ ಕೋರ್ಟು ಮೊರೆ ಹೋಗಿದ್ದಾರೆ.

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ
ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಭಾವಚಿತ್ರಕ್ಕಾಗಿ ಫೈಟ್: ಕೋರ್ಟ್ ಮೊರೆ ಹೋದ ಈಶ್ವರಪ್ಪ
Basavaraj Yaraganavi
| Updated By: Ganapathi Sharma|

Updated on:Apr 06, 2024 | 1:46 PM

Share

ಶಿವಮೊಗ್ಗ, ಏಪ್ರಿಲ್ 6: ಲೋಕಸಭೆ ಚುನಾವಣೆಗೆ (Lok Sabha Elections) ಶಿವಮೊಗ್ಗ (Shivamogga) ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ. ಈ ಮಧ್ಯೆ, ಇದೀಗ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್​​ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವುದಕ್ಕಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ದೆಹಲಿಗೆ ಬರುವಂತೆ ತಿಳಿಸಿದ್ದರು. ಅದರಂತೆ ದೆಹಲಿಗೆ ತೆರಳಿದ್ದ ಈಶ್ವರಪ್ಪ, ಭೇಟಿಗೆ ಅವಕಾಶ ಸಿಗದೇ ವಾಪಸ್ ಆಗಿದ್ದರು. ನಂತರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ಮನಸಿರಬಹುದು. ರಾಜ್ಯದಲ್ಲಿ ಅಪ್ಪ ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಅವರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಏ 12ರಂದು ನಾಮಪತ್ರ: ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ ಎಂದ ಈಶ್ವರಪ್ಪ

ಇನ್ನು ಚುನಾವಣಾ ಪ್ರಚಾರದ ವೇಳೆ ಮೋದಿ ಫೋಟೋ ಬಳಕೆ ವಿಚಾರವಾಗಿ ನೋಡುವುದಾದರೆ, ಈ ಹಿಂದೆ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೂಡ ಇಂಥದ್ದೇ ಒಂದು ಪ್ರಕರಣ ವರದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್ ಕುಮಾರ್ ಪುತ್ತಿಲ ಮೋದಿ ಭಾವಚಿತ್ರ ಬಳಸಿದ್ದಲ್ಲದೆ, ಮೋದಿ ಹೆಸರು ಹೇಳಿಕೊಂಡೇ ಚುನಾವಣೆ ಪ್ರಚಾರ ನಡೆಸಿದ್ದರು. ಸ್ಥಳೀಯ ಬಿಜೆಪಿ ನಾಯಕರ ವಿರೋಧದ ಮಧ್ಯೆಯೂ ಅವರು ಪ್ರಚಾರದಲ್ಲಿ ಮೋದಿ ಹೆಸರು ಬಳೆಸಿಕೊಂಡಿದ್ದಲ್ಲದೆ ಚುನಾವಣೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಹೈಕಮಾಂಡ್ ವರೆಗೆ ಗಮನ ಸೆಳೆದಿದ್ದರು. ಇತ್ತೀಚಿಗೆ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:26 am, Sat, 6 April 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು