AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೆಳೆಯಲು ಸಂಘ ಪರಿವಾರ, ಬಿಎಸ್ ಯಡಿಯೂರಪ್ಪ ಕಾರಣ; ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ

ವೈ ರಾಘವೇಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ಬಿಎಸ್​ವೈ ಮತ್ತು ಈಶ್ವರಪ್ಪ ಯಾವುದೇ ಬಣವಿಲ್ಲ. ಬಿಜೆಪಿ ಪಕ್ಷದಲ್ಲಿ ಸಂಘಟನೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಕಾರ್ಯಕರ್ತರನ್ನು ಗುರುತಿಸಿ ಉನ್ನತ ಸ್ಥಾನ ಬಿಜೆಪಿ ಪಕ್ಷದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಾನು ಬೆಳೆಯಲು ಸಂಘ ಪರಿವಾರ, ಬಿಎಸ್ ಯಡಿಯೂರಪ್ಪ ಕಾರಣ; ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ
ಸಚಿವ ಕೆಎಸ್​ ಈಶ್ವರಪ್ಪ
TV9 Web
| Updated By: sandhya thejappa|

Updated on: Jan 23, 2022 | 3:56 PM

Share

ಶಿವಮೊಗ್ಗ: ನಾನು ಬೆಳೆಯಲು ಸಂಘ ಪರಿವಾರ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಕಾರಣ ಅಂತ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ (KS Eshwarappa) ಹೇಳಿಕೆ ನೀಡಿದ್ದಾರೆ. ಬಿಎಸ್​ವೈ ವಿರುದ್ಧ ಗುಂಪು ಕಟ್ಟಿದ್ರೆ ದ್ರೋಹ ಮಾಡಿದಂತೆ. ನನ್ನ ತಂದೆ, ತಾಯಿಗೆ ನಾನು ದ್ರೋಹ ಮಾಡಿದಂತೆ. ಬಿಎಸ್​ವೈ, ಈಶ್ವರಪ್ಪ ಎನ್ನುವ ಯಾವುದೇ ಗುಂಪು ಇಲ್ಲ ಅಂತ ಯಡಿಯೂರಪ್ಪ ಬಗ್ಗೆ ಈಶ್ವರಪ್ಪ ಭಾವುಕರಾಗಿ ಮಾತನಾಡಿದರು. ಇನ್ನು ನೂತನ ಸೂಡಾ ಅಧ್ಯಕ್ಷ ನಾಗರಾಜ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ಬಿಎಸ್​ವೈ ಮತ್ತು ಈಶ್ವರಪ್ಪ ಯಾವುದೇ ಬಣವಿಲ್ಲ. ಬಿಜೆಪಿ ಪಕ್ಷದಲ್ಲಿ ಸಂಘಟನೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಕಾರ್ಯಕರ್ತರನ್ನು ಗುರುತಿಸಿ ಉನ್ನತ ಸ್ಥಾನ ಬಿಜೆಪಿ ಪಕ್ಷದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಿರ್ಧಾರ ಕೈಗೊಂಡಿದ್ದು ಅಪರಾಧ ಜಿಲ್ಲೆಯಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿಲ್ಲ. ನಗರದ ಯಾವ ಶಾಲೆಗೆ ರಜೆ ನೀಡಬೇಕೆಂದು ಸಂಜೆ ನಿರ್ಧಾರ ಮಾಡಲಾಗುವುದು. ಶಾಲೆಗಳನ್ನ ತೆರೆಯುವಂತೆ ಬಹುತೇಕರು ಮನವಿ ಮಾಡಿದ್ದಾರೆ. ಜ.26ರಂದು ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕೆಲವು ಶಾಲೆಗಳು ಅವರೇ ನಿರ್ಧಾರಕೈಗೊಂಡು ರಜೆ ನೀಡಿವೆ. ಜಿಲ್ಲಾಧಿಕಾರಿ ಸೇರಿದಂತೆ ಯಾರ ಗಮನಕ್ಕೂ ತರದೇ ನಿರ್ಧಾರ ಕೈಗೊಂಡಿದ್ದಾರೆ. ಅವರೇ ನಿರ್ಧಾರ ಕೈಗೊಂಡಿದ್ದು ಅಪರಾಧ ಅಂತ ಈಶ್ವರಪ್ಪ ಅಭಿಪ್ರಾಯಪಟ್ಟರು.

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರಿಗೆ ಕೊರೊನಾ ಬಂತು. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಕೊರೊನಾ ಪಾಸಿಟಿವ್ ಬಂದಿದೆ. ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಬೇಡವೆಂದು ಹೇಳಿದ್ದೆವು. ರಾಜಕಾರಣ ಮಾಡಲು ಹೋಗಿ ಸೋಂಕು ಹರಡುವಂತಾಯಿತು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸೋಂಕು ಹೆಚ್ಚಳವಾಗಿಲ್ಲ. ಎಲ್ಲದಕ್ಕೂ ರಾಜಕಾರಣ ಬೆರೆಸುವುದು ಒಳ್ಳೆ ಬೆಳವಣಿಗೆಯಲ್ಲ ಅಂತ ತಿಳಿಸಿದರು.

ಇದನ್ನೂ ಓದಿ

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ 10 ಅಡಿ ಕಾಳಿಂಗ ಸರ್ಪ ಪ್ರತ್ಯಕ್ಷ! ವಿಡಿಯೋ ನೋಡಿ

Republic Day 2022: ಗಣರಾಜ್ಯೋತ್ಸವದ ಹಿನ್ನೆಲೆ, ಸಂವಿಧಾನದ ಬಗ್ಗೆ ಈ ವಿಚಾರಗಳನ್ನು ತಿಳಿದುಕೊಳ್ಳಲೇಬೇಕು

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ