Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa Birthday: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು.

BS Yediyurappa Birthday: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
Follow us
ವಿವೇಕ ಬಿರಾದಾರ
|

Updated on: Feb 27, 2023 | 9:42 AM

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ (BS Yediyurappa) ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ (Shivamogga) ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು. ಈ ವೇಳೆ ತಂದೆಗೆ ಪುತ್ರ, ಸಂಸದ ಬಿ ವೈ ರಾಘವೇಂದ್ರ (BY Raghavendra) ಕುಟುಂಬ ಸದಸ್ಯರು ಜೊತೆ ಇದ್ದರು. ಈ ವೇಳೆ ಅಭಿಮಾನಿಗಳಿಂದ ಬಿ.ಎಸ್ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ದೊರೆಯಿತು.

ಇದನ್ನೂ ಓದಿ: 80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ ಸಾಗಿ ಬಂದ ಹಾದಿ ಸುಲಭದ್ದೇನಲ್ಲ…

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ಮುಂದಿನ ಬಾರಿಯೂ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಪಣ ತೊಟ್ಟಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾನು ಹೇಳುವುದಿಷ್ಟೆ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು. ಇದಕ್ಕಾಗಿ ನಾವೆಲ್ಲ ಶ್ರಮಿಸಬೇಕಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು