ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ (Shivamogga) ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು. ಈ ವೇಳೆ ತಂದೆಗೆ ಪುತ್ರ, ಸಂಸದ ಬಿ ವೈ ರಾಘವೇಂದ್ರ (BY Raghavendra) ಕುಟುಂಬ ಸದಸ್ಯರು ಜೊತೆ ಇದ್ದರು. ಈ ವೇಳೆ ಅಭಿಮಾನಿಗಳಿಂದ ಬಿ.ಎಸ್ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ದೊರೆಯಿತು.
ಇದನ್ನೂ ಓದಿ: 80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ ಸಾಗಿ ಬಂದ ಹಾದಿ ಸುಲಭದ್ದೇನಲ್ಲ…
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ಮುಂದಿನ ಬಾರಿಯೂ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಪಣ ತೊಟ್ಟಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾನು ಹೇಳುವುದಿಷ್ಟೆ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು. ಇದಕ್ಕಾಗಿ ನಾವೆಲ್ಲ ಶ್ರಮಿಸಬೇಕಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ