ಶಿಕಾರಿಪುರ: ಬಿಎಸ್ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಅಂಗಡಿ ಮುಂಗಟ್ಟು ಬಂದ್; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

BS Yediyurappa Resign: ಯಡಿಯೂರಪ್ಪರನ್ನೇ ಸಿಎಂ ಆಗಿ ಮುಂದುವರಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಬಿಎಸ್​ವೈ ಇಲ್ಲದಿದ್ದರೆ ಬಿಜೆಪಿ ಸರ್ಕಾರ ಸರ್ವನಾಶವಾಗಲಿದೆ ಎಂದು ಶಿಕಾರಿಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಶಿಕಾರಿಪುರ: ಬಿಎಸ್ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಅಂಗಡಿ ಮುಂಗಟ್ಟು ಬಂದ್; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಶಿಕಾರಿಪುರದಲ್ಲಿ ಅಂಗಡಿ ಮುಂಗಟ್ಟು ಬಂದ್ ಆಗಿರುವುದು
Updated By: ganapathi bhat

Updated on: Jul 26, 2021 | 4:00 PM

ಶಿವಮೊಗ್ಗ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಕೆ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಕ್ಷೇತ್ರ ಶಿಕಾರಿಪುರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಅಸಮಾಧಾನ ಹೊರಹಾಕಲಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಸಿದ್ದಕ್ಕೆ ತವರು ಕ್ಷೇತ್ರದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದರಿಂದ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಬಸ್​ ನಿಲ್ದಾಣ ಬಳಿ ಪ್ರತಿಭಟನೆ ಮಾಡಲಾಗಿದೆ. ಕೇಂದ್ರದ ಬಿಜೆಪಿ ನಾಯಕರ​​ ವಿರುದ್ಧ ಧರಣಿ ನಿರತರು ಆಕ್ರೋಶ ಹೊರಹಾಕಿದ್ದಾರೆ. ಯಡಿಯೂರಪ್ಪರನ್ನೇ ಸಿಎಂ ಆಗಿ ಮುಂದುವರಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಬಿಎಸ್​ವೈ ಇಲ್ಲದಿದ್ದರೆ ಬಿಜೆಪಿ ಸರ್ಕಾರ ಸರ್ವನಾಶವಾಗಲಿದೆ ಎಂದು ಶಿಕಾರಿಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅರುಣ್ ಸಿಂಗ್
ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಿಎಂ ಬಗ್ಗೆ ಚರ್ಚೆ ಮಾಡಲಾಗುವುದು. ಬಳಿಕ, ಕರ್ನಾಟಕ ಸಿಎಂ ಬಗ್ಗೆ ಸಂಸದೀಯ ಮಂಡಳಿ ಸಭೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ಆದರೆ, ಬಿಜೆಪಿ ಸಂಸದೀಯ ಮಂಡಳಿ ಸಭೆ ಬಗ್ಗೆ ನಿರ್ಧಾರವಾಗಿಲ್ಲ. ಬೆಂಗಳೂರಿಗೆ ನಾನು ತೆರಳುವ ಬಗ್ಗೆಯೂ ಇನ್ನೂ ನಿರ್ಧರಿಸಿಲ್ಲ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ

ಯಡಿಯೂರಪ್ಪ ವಿರೋಧಿ ಬಣದಿಂದ ಸ್ವಾತಂತ್ರ್ಯದ ಬಾವುಟ! ಸಂದರ್ಭಕ್ಕೆ ತಕ್ಕಂತೆ ಪದ-ಪದವಿ ಪೋಣಿಸುವುದಾದರೆ ಅದು ಹೀಗಾಗಬಹುದೇ?

(BS Yediyurappa Resigns as CM of Karnataka Shikaripura BJP Workers Protest Shops Closed)

Published On - 3:58 pm, Mon, 26 July 21