​ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಬಿಎಸ್ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ

| Updated By: Rakesh Nayak Manchi

Updated on: Jul 20, 2023 | 5:15 PM

ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್‌ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

​ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಬಿಎಸ್ ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
Follow us on

ಶಿವಮೊಗ್ಗ: ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್‌ ಮಂಡಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ (Honorary Doctorate) ಘೋಷಣೆ ಮಾಡಿದೆ. ಶುಕ್ರವಾರ (ಜುಲೈ 21) ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಗದೀಶ್ ಹೇಳಿದ್ದಾರೆ.

ಗೌರವ ಡಾಕ್ಟರೇಟ್ ಘೋಷಣೆ ಹಿನ್ನೆಲೆ ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್‌ಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್‌ ಮಂಡಿಸುವ ಜತೆ ಸದಾ ರೈತಪರ ಕಾಳಜಿ ವಹಿಸುವ ತಮ್ಮ ರಾಜಕೀಯ ಜೀವನ ಪ್ರೇರಣಾದಾಯಕವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪರನ್ನ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಿಟಿ ರವಿ, ಏನು ವಿಶೇಷ..?

ಯಡಿಯೂರಪ್ಪ ಅವರು 2008ರಲ್ಲಿ ಮುಖ್ಯಮಂತ್ರಿಯಾದ ಸಮಯದಲ್ಲಿ ದೇಶದಲ್ಲೇ ಮೊದಲ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ ಗಮನಸೆಳೆದಿದ್ದರು. ಈ ವೇಳೆ ರೈತರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮೊದಲ ಬಾರಿ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ಯೋಜನೆ ಜಾರಿ ಮಾಡಿದ್ದರು. ಇದಲ್ಲದೆ, ಸಾವಯವ ಕೃಷಿ ಯೋಜನೆ, ಸುವರ್ಣ ಭೂಮಿ ಯೋಜನೆ ಜಾರಿಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ