ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ

ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿವೈ ವಿಜಯೇಂದ್ರ(BY Vijayendra) ಮೊದಲ ಬಾರಿಗೆ ಬಿಜೆಪಿ(BJP) ಕಚೇರಿಗೆ ಭೇಟಿ ನೀಡಿದ್ದಾರೆ. ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಸ್ವಾಗತಿಸಿದರು. ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಮುಂದಿರುವ ಸವಾಲು ಎಂದು ವಿಜಯೇಂದ್ರ ಹೇಳಿದ್ದಾರೆ.

ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ Image Credit source: Deccan Herald
Follow us
Basavaraj Yaraganavi
| Updated By: ನಯನಾ ರಾಜೀವ್

Updated on:Nov 29, 2023 | 10:59 AM

ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿವೈ ವಿಜಯೇಂದ್ರ(BY Vijayendra) ಮೊದಲ ಬಾರಿಗೆ ಬಿಜೆಪಿ(BJP) ಕಚೇರಿಗೆ ಭೇಟಿ ನೀಡಿದ್ದಾರೆ. ಬಿವೈ ರಾಘವೇಂದ್ರ ಅವರು ವಿಜಯೇಂದ್ರ ಅವರನ್ನು ಸ್ವಾಗತಿಸಿದರು. ರಾಜ್ಯದಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಬೇಕಿದೆ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಮುಂದಿರುವ ಸವಾಲು ಎಂದು ವಿಜಯೇಂದ್ರ ಹೇಳಿದ್ದಾರೆ.

ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ. ಅದಕ್ಕಾಗಿ ಎಲ್ಲರೂ ಕೈಜೋಡಿಸಬೇಕಿದೆ ಎಂದಿದ್ದಾರೆ. ನೂತನವಾಗಿ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ನವೆಂಬರ್ 15ರಂದು ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು.

ಬಳಿಕ ವಿಜಯೇಂದ್ರ ಗುಂಡಪ್ಪ ಶೆಡ್​ನಲ್ಲಿರುವ ಈಶ್ವರಪ್ಪ ಮನೆಗೂ ಭೇಟಿ ನೀಡಿದ್ದಾರೆ. ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಎಷ್ಟು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೀರಿ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ, ಅದಕ್ಕೆ ನಾಲ್ಕೈದು ಜಿಲ್ಲೆಗಳಾಗಿದೆ ಬೆಳಗಾವಿ ಅಧಿವೇಶನ ಮುಗಿಸಿ ಮತ್ತೆ ಪ್ರವಾಸ ಮಾಡುತ್ತೇನೆ ಎಂದು ಉತ್ತರ ನೀಡಿದ್ದಾರೆ.

ನವೆಂಬರ್ 10 ರಂದು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ನೇಮಿಸಿತ್ತು. ವಿಜಯೇಂದ್ರ ಅವರು ಚತುರ ಸಂಘಟನಾ ನಾಯಕರಾಗಿ ಕಾಣಿಸಿಕೊಂಡಿದ್ದಾರೆ ಮತ್ತು ಅವರಿಗೆ ನೀಡಲಾದ ಪಾತ್ರವನ್ನು ತಮ್ಮ ಸಾಮರ್ಥ್ಯದಿಂದ ಪಕ್ಷದ ನಾಯಕರನ್ನು ಮೆಚ್ಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: BY Vijayendra: ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ

ಮೇಲ್ನೋಟಕ್ಕೆ ವಿಜಯೇಂದ್ರ ಅವರು, ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಶಿಕಾರಿಪುರದ ಹಾಲಿ ಶಾಸಕ ಎಂದಷ್ಟೇ ಎಲ್ಲರಿಗೂ ತಿಳಿದಿದೆ. ವಿಜಯೇಂದ್ರ 1975ರ ನ. 5ರಂದು ಜನಿಸಿದರು. ಬೆಂಗಳೂರಿನ ಜನಸೇವಾ ವಿದ್ಯಾಕೇಂದ್ರದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು, ಬಳಿಕ ಬಿ.ಎ. ಹಾಗೂ ಕಾನೂನು ಪದವಿ ಪಡೆದರು. ಕೆಲ ದಿನಗಳ ಕಾಲ ವಕೀಲರಾಗಿಯೂ ಸೇವೆ ಸಲ್ಲಿಸಿದ್ದಾರೆ.

1990ರ ದಶಕದ ಮಧ್ಯಭಾಗದಿಂದ ಬಿಜೆಪಿ ಸದಸ್ಯರಾಗಿರುವ ಅವರು, ಪಕ್ಷದಿಂದ ಹಮ್ಮಿಕೊಳ್ಳಲಾದ ಹಲವಾರು ಕಾರ್ಯಕ್ರಮಗಳು, ಆಂದೋಲನಗಳು, ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:51 am, Wed, 29 November 23