ಶಿವಮೊಗ್ಗ, ಜುಲೈ 15: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್ ವಾರಕ್ಕೊಮ್ಮೆ ವಿಮಾನಯಾನ ಸೇವೆ ಒದಗಲಿಸಲಿದೆ. ಶಿವಮೊಗ್ಗ ಚೆನ್ನೈ ವಿಮಾನ ಸೇವೆ ಬಗ್ಗೆ ಸಂಸದ ರಾಘವೇಂದ್ರ ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಚೆನ್ನೈ ವಿಮಾನ ಸೇವೆಯು ಮಲೆನಾಡು ಪ್ರದೇಶದಲ್ಲಿ ಉದ್ಯಮ ಮತ್ತು ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸುವ ನಿರೀಕ್ಷೆಯಿದೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.
ಶಿವಮೊಗ್ಗದಿಂದ ಚೆನ್ನೈಗೆ ಆಗಸ್ಟ್ 15ರಿಂದ ವಿಮಾನಯಾನ ಸೇವೆ ಪ್ರಾರಂಭವಾಗಲಿದೆ.
ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದ್ರಾಬಾದ್ ಸೇರಿದಂತ ಪ್ರಮುಖ ನಗರಗಳಿಗೂ ಸ್ಟೈಸ್ ಜೆಟ್ ವಿಮಾನ ಹಾರಾಟ ನಡೆಸಲಿದೆ.
ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ… pic.twitter.com/1xrZsAhkzU
— B Y Raghavendra (@BYRBJP) July 14, 2024
ಶಿವಮೊಗ್ಗದಿಂದ ಚೆನ್ನೈಗೆ ಆಗಸ್ಟ್ 15ರಿಂದ ವಿಮಾನಯಾನ ಸೇವೆ ಪ್ರಾರಂಭವಾಗಲಿದೆ. ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೂ ಸ್ಟೈಸ್ ಜೆಟ್ ವಿಮಾನ ಹಾರಾಟ ನಡೆಸಲಿದೆ. ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ ಮಾಡುವಂತೆ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಹೊಸದಿಲ್ಲಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶೀಘ್ರದಲ್ಲೇ ಸಮಸ್ಯೆ ನಿವಾರಣೆಯಾಗಲಿದೆ. ಇದು ಮಲೆನಾಡಿನ ಉದ್ಯಮ, ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆ ಮೂಡಿಸಿದೆ ಎಂದು ರಾಘವೇಂದ್ರ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಮುಡಾ ವಿವಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ 158 ನಿವೇಶನ ರದ್ದು: ಏನಿದು ಸೂಡಾ ಹಂಚಿಕೆ ಕೇಸ್?
ಕುವೆಂಪು ವಿಮಾನ ನಿಲ್ದಾಣ ಎಂದೂ ಕರೆಯಲ್ಪಡುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಸ್ತುತ ನಾಲ್ಕು ಸ್ಥಳಗಳಿಗೆ ವಿಮಾನ ಸೇವೆ ಲಭ್ಯವಿದೆ. ಶಿವಮೊಗ್ಗದಿಂದ ಬೆಂಗಳೂರು (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ), ಹೈದರಾಬಾದ್ (ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ಗೋವಾ (ಮೋಪಾ ವಿಮಾನ ನಿಲ್ದಾಣ) ಮತ್ತು ತಿರುಪತಿಗೆ ವಿಮಾನ ಸೇವೆ ಲಭ್ಯವಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ