ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ: ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ​ ಯಡಿಯೂರಪ್ಪ

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ ಶಂಕುಸ್ಥಾಪನೆ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದ್ದಾರೆ.

  • TV9 Web Team
  • Published On - 17:57 PM, 17 Feb 2021
ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ: ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ​ ಯಡಿಯೂರಪ್ಪ
ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ಬಿ.ಎಸ್​ ಯಡಿಯೂರಪ್ಪ

ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸಂಘದ ರಜತ ಮಹೋತ್ಸವ ಕಟ್ಟಡ ಶಂಕುಸ್ಥಾಪನೆ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ ಹಾಗೂ ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಿ.ಎಸ್​ ಯಡಿಯೂರಪ್ಪ, ಕೈಗಾರಿಕೆಗಳಿಗೆ ರಾಜ್ಯ ಸರ್ಕಾರ ವಿಶೇಷ ಆದ್ಯತೆಯನ್ನು ನೀಡಿದೆ. ಶೀಘ್ರದಲ್ಲೇ ಶಿವಮೊಗ್ಗ ಏರ್‌ಪೋರ್ಟ್ ಕಾಮಗಾರಿ ಪೂರ್ಣಗೊಳ್ಳುತ್ತದೆ. ಇದರಿಂದ ಜಿಲ್ಲೆಗೆ ಮತ್ತಷ್ಟು ಕೈಗಾರಿಕೆಗಳು ಬರಲಿವೆ. ಕಾರ್ಮಿಕರಿಗೆ ವಸತಿ ಯೋಜನೆ ಶೀಘ್ರದಲ್ಲಿ ಜಾರಿ ಮಾಡುತ್ತೇವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರಕ್ಕೆ ಸಂಬಂಧಿಸಿ, ಇಂದು ಕೈಗಾರಿಕಾ ಸಂಘ 70 ಲಕ್ಷ ರೂಪಾಯಿ ನೀಡಿದೆ. ವಿರೋಧ ಪಕ್ಷದ ನಾಯಕರು ಎಚ್ಚರಿಕೆಯಿಂದ ಮಾತನಾಡಿ, ದೇಣಿಗೆ ಬಗ್ಗೆ ವಿನಾಕಾರಣ ಟೀಕೆ ಮಾಡಬೇಡಿ. ಈ ಬಗ್ಗೆ ಮಾತಾಡಿದರೆ ‘ಸುಪ್ರೀಂ’ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ

BS Yediyurappa

ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆ.ಎಸ್​. ಈಶ್ವರಪ್ಪ ಮಾತನಾಡಿ ಸಚಿವರು, ಸಂಸದರು, ಶಾಸಕರು ಎಲ್ಲಾ ಒಟ್ಟುಗೂಡಿ ಕಾರ್ಮಿಕರಿಗೆ ಶೀಘ್ರದಲ್ಲೇ ಮನೆ ಯೋಜನೆ ಜಾರಿ ಮಾಡುತ್ತೇವೆ ಎಂದು ಮಾತನಾಡಿದರು. ಈ ಕುರಿತಂತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್‌, ಇತಿಹಾಸದ ಪುಟಗಳಲ್ಲಿ ಬರೆಯುವಂತಹ ಕೆಲಸವನ್ನು ಬಿಎಸ್​ವೈ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿ ಕೈಗೊಂಡಿದ್ದಾರೆ ಎಂದು ಹೇಳಿದರು.