ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕರ ನಡುವೆ ಗಲಾಟೆ; 3 ಮಂದಿಗೆ ಚಾಕು ಇರಿತ

ಶಿವಮೊಗ್ಗದ ಜೆಪಿನಗರ ಬಳಿ ಗುರುವಾರ ರಾತ್ರಿ ವೈಯಕ್ತಿಕ ಕಾರಣಕ್ಕೆ ಎರಡು ಗ್ಯಾಂಗ್​ಗಳ ನಡುವೆ ಗಲಾಟೆ ನಡೆದಿದ್ದು ಮೂವರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡ ಮೂವರು ರೌಡಿಶೀಟರ್​ಗಳಾಗಿದ್ದು, 15 ದಿನಗಳ ಹಿಂದೆ ಈ ಎರಡೂ ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು.

ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕರ ನಡುವೆ ಗಲಾಟೆ; 3 ಮಂದಿಗೆ ಚಾಕು ಇರಿತ
ತುಂಗಾನಗರ ಪೊಲೀಸ್​ ಠಾಣೆ
Follow us
| Updated By: ವಿವೇಕ ಬಿರಾದಾರ

Updated on:Nov 10, 2023 | 3:00 PM

ಶಿವಮೊಗ್ಗ ನ.10: ವೈಯಕ್ತಿಕ ಕಾರಣಕ್ಕೆ ಎರಡು ಗ್ಯಾಂಗ್​ಗಳ (Gang) ಗಲಾಟೆ ನಡೆದಿದ್ದು ಮೂವರಿಗೆ ಚಾಕು ಇರಿದಿರುವ ಘಟನೆ ಜೆಪಿ ನಗರ (JP Nagar) ಬಳಿ ಗುರುವಾರ (ನ.09) ರಾತ್ರಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್​ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್​ಗಳು. 15 ದಿನದ ಹಿಂದೆ ರೌಡಿಶೀಟರ್​ಗಳಾದ ಸಮೀರ್​​​, ಫರಾಜ್​ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್​ ನಡುವೆ ಗಲಾಟೆ ನಡೆದಿತ್ತು.

ಯುವಕರು ಗುರುವಾರ ಜೆಪಿನಗರದ ಜಂಡೆಕಟ್ಟೆ ಬಳಿ ಗ್ಯಾರವಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಪರಸ್ಪರ ಗುರಾಯಿಸಿಕೊಂಡು, ಮತ್ತೆ ಮಾರಕಾಸ್ತ್ರದಿಂದ ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ನಗರದ ತುಂಗಾನಗರ ಠಾಣೆಯಲ್ಲಿ ಐಪಿಸಿ 323, 324, 307, 504, 341 r/w 149 IPC ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ

ಚಾಕು ಇರಿತಕ್ಕೆ ಸಂಬಂಧಿಸಿದಂತೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮೀರ್, ಸೋನು ಸೇರಿದಂತೆ ಮೂವರಿಗೆ ಹರಿತವಾದ ವಸ್ತುವಿನಿಂದ ಚುಚ್ಚಲಾಗಿದೆ. ದೇಹದ ಎದೆಯ ಭಾಗಕ್ಕೆ ಹಾಗೂ ಕೈ ಮತ್ತು ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಪ್ರಾಣಾಪ್ರಾಯದಿಂದ ಎಲ್ಲರೂ ಪಾರಾಗಿದ್ದಾರೆ. ದೂರು ಪಡೆದಿದ್ದೇವೆ. ಈ ಎರಡು ಗುಂಪಿನ ನಡುವೆ ಮೊದಲಿನಿಂದ ವೈಯಕ್ತಿಕ ದ್ವೇಷ ಇದೆ‌. ಕಳೆದ 15 ದಿನಗಳ ಹಿಂದೆಯೂ ಕೂಡ ಇದೇ ರೀತಿ ಗಲಾಟೆ ಮಾಡಿಕೊಂಡಿದ್ದರು. ಗುರುವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಗುರಾಯಿಸಿಕೊಂಡು ಗಲಾಟೆ ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ಮೂವರನ್ನು ಈಗಾಗಲೇ ನಾವು ವಶಕ್ಕೆ ಪಡೆದಿದ್ದೇವೆ ಎಂದು ಶಿವಮೊಗ್ಗ ಎಸ್ಪಿ ಜಿ‌.ಕೆ.ಮಿಥುನ್ ಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:51 am, Fri, 10 November 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ