ಶಿವಮೊಗ್ಗ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದ ಯುವಕರು, ಗಲಾಟೆ
ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮಸೀದಿ ಮುಂದೆ ಸಾಗುತ್ತಿದ್ದಾಗ ಯುವಕರು ಪಟಾಕಿ ಸಿಡಿಸಿದ್ದಾರೆ. ಇದು ಅನ್ಯಕೋಮಿನ ಯುವಕರ ಆಕ್ರೋಶಕ್ಕೆ ಕಾರಣವಾಯಿತು. ಪರಿಣಾಮ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ, ಸೆ.22: ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ (Ganeshotsav) ಮಸೀದಿ ಮುಂದೆ ಸಾಗುತ್ತಿದ್ದಾಗ ಯುವಕರು ಪಟಾಕಿ ಸಿಡಿಸಿದ್ದಾರೆ. ಇದು ಅನ್ಯಕೋಮಿನ ಯುವಕರ ಆಕ್ರೋಶಕ್ಕೆ ಕಾರಣವಾಯಿತು. ಪರಿಣಾಮ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಗಣೇಶನ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಮೆರವಣಿಗೆಯಲ್ಲಿದ್ದ ಕೆಲವರು ಪಟಾಕಿ ಸಿಡಿಸಿದ್ದಾರೆ. ಮಸೀದಿ ಎದುರು ಪಟಾಕಿ ಹಚ್ಚಿದ್ದಕ್ಕೆ ಅನ್ಯಕೋಮಿನ ಯುವಕರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಹಾವೇರಿ: ಬಾವುಟ ಕಟ್ಟುವ ವಿಚಾರದಲ್ಲಿ ಹಿಂದೂ ಮುಸ್ಲಿಂ ಗಲಾಟೆ
ಘಟನೆ ಖಂಡಿಸಿ ಅನ್ಯಕೋಮಿನ ಯುವಕರು ಪ್ರತಿಭಟನೆ ನಡೆಸಿದ್ದು, ಮಸೀದಿ ಎದುರು ಪಟಾಕಿ ಹಚ್ವಿ ಗಲಭೆಗೆ ಕಾರಣರಾದವರನ್ನು ಕೂಡಲೆ ಬಂಧಿಸಬೇಕು ಎಂದು ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಡಿಷನಲ್ ಎಸ್ಪಿ ಅನಿಲ್ ಭೂಮರೆಡ್ಡಿ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿ ಮನವೊಲಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ