CM Bommai Press Meet: ಯಾವುದೇ ಮೌಖಿಕ ಆದೇಶದ ಕಾಮಗಾರಿ ಮಾಡಬಾರದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ
50 ಕೋಟಿ ರೂ. ಮೇಲ್ಪಟ್ಟ ಟೆಂಡರ್ ಕಮಿಟಿಗೆ ಹೋಗುತ್ತದೆ. ವಾರದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ಕಮಿಟಿ ರಚನೆ ಮಾಡಲಾಗುತ್ತೆ ಎಂದು ಶಿವಮೊಗ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು.
ಶಿವಮೊಗ್ಗ: ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿದ್ದು ರಾಜ್ಯದಲ್ಲಿನ ಕೋಮುಗಲಭೆ, ವಿದ್ಯುತ್ ಸಮಸ್ಯೆ ಸೇರಿದಂತೆ ಕೆಲ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಗಳ ಮುಖಂಡರ ಜತೆ ಸಭೆ ನಡೆಸಿದ್ದೇವೆ. ಶಿವಮೊಗ್ಗ ಜಿಲ್ಲೆಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಮೇ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸುತ್ತೇವೆ. 4 ಜಿಲ್ಲೆಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ಮಾಡ್ತೇವೆ ಎಂದು ತಿಳಿಸಿದ್ದಾರೆ.
50 ಕೋಟಿ ರೂ. ಮೇಲ್ಪಟ್ಟ ಟೆಂಡರ್ ಕಮಿಟಿಗೆ ಹೋಗುತ್ತದೆ. ವಾರದಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ಕಮಿಟಿ ರಚನೆ ಮಾಡಲಾಗುತ್ತೆ ಎಂದು ಶಿವಮೊಗ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ರು. ಯಾವುದೇ ಮೌಖಿಕ ಆದೇಶದ ಕಾಮಗಾರಿ ಮಾಡಬಾರದು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ, ಸಿಇಒಗೆ ಸೂಚಿಸಲಾಗಿದೆ. ಅಗತ್ಯಬಿದ್ದರೆ ಜಿಲ್ಲಾಮಟ್ಟದಲ್ಲೂ ಕಮಿಟಿ ರಚನೆ ಮಾಡುತ್ತೇವೆ ಎಂದರು.
ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ. ವಿದ್ಯುತ್ ಹಂಚಿಕೆ ಮತ್ತು ಸರಬರಾಜಿನಲ್ಲಿ ಸಮಸ್ಯೆ ಇದೆ. ಈ ಸಮಸ್ಯೆಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಇತ್ತೀಚೆಗೆ ಕೋಮುಗಲಭೆ ಹೆಚ್ಚಾಗಿದೆ. ಸಮಾಜದಲ್ಲಿ ಎಲ್ಲರೂ ಸಂಯಮದಿಂದ ಇರಬೇಕು ಎಂದು ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆ ತನ್ನದೇ ರೀತಿಯಲ್ಲಿ ತನಿಖೆ ಮಾಡುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಥಿಯೇಟರ್ನಲ್ಲಿ ಕೆಜಿಎಫ್ 2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ!
Published On - 11:37 am, Wed, 20 April 22