ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ಗೊಂದಲಕ್ಕೆ ತೆರೆ; ರಾಷ್ಟಕವಿ ಕವಿ ಕುವೆಂಪು ಹೆಸರಿಡುವ ಬಗ್ಗೆ ಕೇಂದ್ರಕ್ಕೆ ಖುದ್ದು ಸಿಎಂ ಶಿಫಾರಸು

ರಾಷ್ಟ್ರಕವಿ ಕುವೆಂಪು ಹೆಸರಿಡಲು ಖುದ್ದು ಸಿಎಂ ಬೊಮ್ಮಾಯಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಒಪ್ಪಿಗೆ ಪಡೆದಿದ್ದಾರೆ. ಹಾಗೂ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ನಾಮಕರಣ ಗೊಂದಲಕ್ಕೆ ತೆರೆ; ರಾಷ್ಟಕವಿ ಕವಿ ಕುವೆಂಪು ಹೆಸರಿಡುವ ಬಗ್ಗೆ ಕೇಂದ್ರಕ್ಕೆ ಖುದ್ದು ಸಿಎಂ ಶಿಫಾರಸು
ಸಿಎಂ ಬೊಮ್ಮಾಯಿ, ಶಿವಮೊಗ್ಗ ಏರ್ಪೋರ್ಟ್, ಕುವೆಂಪು
Follow us
| Updated By: ಆಯೇಷಾ ಬಾನು

Updated on: Feb 21, 2023 | 7:10 AM

ಶಿವಮೊಗ್ಗ:  ಮಲೆನಾಡು ಜನತೆಯ ಬಹುವರ್ಷಗಳ ಕನಸು ನನಸಾಗುತ್ತಿದೆ. ಶಿವಮೊಗ್ಗದಲ್ಲಿ ಕೊನೆಗೂ ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್ ಆಗಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಶಿವಮೊಗ್ಗ ವಿಮಾನ ನಿಲ್ದಾಣದ( Shimoga Airport)  ಉದ್ಘಾಟನೆ ಮಾಡಲಿದ್ದಾರೆ. ಆದ್ರೆ ಮತ್ತೊಂದುಕಡೆ, ಶಿವಮೊಗ್ಗ ಏರ್ಪೋರ್ಟ್ ನಾಮಕರಣದ ಗೊಂದಲವೂ ಶುರುವಾಗಿದ್ದು, ರಾಷ್ಟ್ರಕವಿ ಕುವೆಂಪು ಹೆಸರಿಡಲು ಖುದ್ದು ಸಿಎಂ ಬೊಮ್ಮಾಯಿ(Basavaraj Bommai) ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಒಪ್ಪಿಗೆ ಪಡೆದಿದ್ದಾರೆ. ಹಾಗೂ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ಮೊದಲ ಬಾರಿಗೆ ಸಿಎಂ ಆದಾಗ ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ಏರ್ ಪೋರ್ಟ್ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ಏರ್ ಪೋರ್ಟ್ ಕಾಮಗಾರಿಯು ಸ್ಥಗಿತಗೊಂಡಿತ್ತು. ಮತ್ತೆ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ನೆನಗುದಿಗೆ ಬಿದ್ದಿದ್ದ ಏರ್ ಪೋರ್ಟ್ ಕಾಮಗಾರಿಗೆ ಮರುಚಾಲನೆ ಕೊಟ್ಟರು. ಅವರು ಮುಖ್ಯಮಂತ್ರಿಯಾಗಿದ್ದಾಗ ನಿರಂತರವಾಗಿ ಏರ್ ಪೋರ್ಟ್​ಗೆ ಅನುದಾನ ಮತ್ತು ಅವರೇ ಪ್ರತಿಸಾರಿ ಶಿವಮೊಗ್ಗ ಬಂದಾಗ ಏರ್ ಪೋರ್ಟ್ ಕಾಮಗಾರಿ ಪರಿಶೀಲನೆ ನಡೆಸುತ್ತಿದ್ದರು. ಪುತ್ರ ಸಂಸದ ಬಿ. ವೈ ರಾಘವೇಂದ್ರಗೆ ಏರ್ ಪೋರ್ಟ್ ಕಾಮಗಾರಿ ಪೂರ್ಣಗೊಳಿಸಿ ಮಲೆನಾಡಿನಲ್ಲಿ ವಿಮಾನ ಹಾರಾಟಕ್ಕೆ ಟಾರ್ಗೇಟ್ ಕೊಟ್ಟಿದ್ದರು.

ಶಿವಮೊಗ್ಗ ಹಾಗೂ ಶಿವಮೊಗ್ಗ ಏರ್ಪೋರ್ಟ್​ಗೆ ಬಿಎಸ್​ವೈ ಅವರ ಕೊಡುಗೆ ಅಪಾರ. ಹೀಗಾಗಿ ಅವರ ಅಭಿಮಾನಿಗಳು ಬಿಎಸ್​ವೈ ಹೆಸರು ಇಡುವಂತೆ ಒತ್ತಾಯಿಸಿದ್ದರು. ಆದ್ರೆ ಖುದ್ದು ಯಡಿಯೂರಪ್ಪ, ನನ್ನ ಹೆಸರು ಬೇಡ ಕುವೆಂಪು ಹೆಸರು ಇಡೋಣ ಎಂದಿದ್ದರು. ಇದರ ನಡುವೆಯೂ ಒಕ್ಕೊರಲಿನಿಂದ ಜಿಲ್ಲೆಯ ಶಾಸಕರೆಲ್ಲರೂ ಮತ್ತು ಮುಖಂಡರು ಪಕ್ಷ ಬೇದ ಮರೆತು, ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು ಇಡೀ ಎಂಬ ಪ್ರಸ್ತಾವನೆ ಮುಂದುವರೆಸಿದ್ದರು. ಮತ್ತೊಂದೆಡೆ ಮಾಜಿ ಸಿಎಂ ಎಸ್ ಬಂಗಾರಪ್ಪ ಹೆಸರು ಇಡಬೇಕೆಂದು ಮಲೆನಾಡಿನ ಈಡಿಗ ಸಮಾಜ ಒತ್ತಾಯಿಸಿತ್ತು. ಇದರೆಲ್ಲದರ ನಡುವೆ ಈಗ ಖುದ್ದು ಸಿಎಂ ನಾಮಕರಣ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧರಿಸಿದ್ದಾರೆ.

ಶಿವಮೊಗ್ಗ ಏರ್‌ಪೋರ್ಟ್‌ಗೆ ಕುವೆಂಪು ಹೆಸರು

ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಏರ್‌ಪೋರ್ಟ್‌ಗೆ ರಾಷ್ಟ್ರಕವಿ ಕುವೆಂಪು ಹೆಸರಿಡುವ ಬಗ್ಗೆ ಖುದ್ದು ಸಿಎಂ ಪ್ರಾಸ್ತಾಪ ಮಾಡಿದ್ದಾರೆ. ಹಾಗೂ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಒಪ್ಪಿಗೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಮೊದಲ ವಿಮಾನ ಪ್ರಧಾನಿ ಮೋದಿಯವರದ್ದು; ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ ಏರ್​ಪೋರ್ಟ್​ ವಿಶೇಷತೆ

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ ಸರ್ವೇ ನಂ. 120 ರಲ್ಲಿ 775 ಎಕರೆ ಭೂಮಿಯಲ್ಲಿ ಏರ್ ಪೋರ್ಟ್ ಕಾಮಗಾರಿಯು 384 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ನಡುವೆ 2008ರಲ್ಲಿ ಆರಂಭವಾದ ಈ ಏರ್ ಪೋರ್ಟ್ ಕಾಮಗಾರಿಯು 2023ರಲ್ಲಿ ಪೂರ್ಣಗೊಂಡಿದೆ. ಕೊನೆಗೂ ಜನರು ಸಂಸತಸ ಪಡುವಂತಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ನೂತನ ಏರ್ ಪೋರ್ಟ್ ವೀಕ್ಷಣೆ ಮಾಡುತ್ತಿದ್ದಾರೆ. ಕೆಲವು ದಿನಗಳಿಂದ ಶಿವಮೊಗ್ಗ ಏರ್ ಪೋರ್ಟ್ ಪ್ರವಾಸಿ ತಾಣವಾಗಿ ಮಾರ್ಪಾಡಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನರು ಏರ್ ಪೋರ್ಟ್​​ಗೆ ಭೇಟಿ ನೀಡುವುದು. ಸೇಲ್ಫಿ ಮತ್ತು ಫ್ಯಾಮಿಲಿ ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ಇನ್ನೇನು ಫೆ. 27ಕ್ಕೆ ಏರ್ ಪೋರ್ಟ್ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ಆದ ಕೆಲವೇ ದಿನಗಳಲ್ಲಿ ಮಲೆನಾಡಿನಲ್ಲಿ ಲೋಹದ ಹಕ್ಕಿಗಳ ಹಾರಾಟ ಆಗಲಿದೆ. ಮಲೆನಾಡಿನ ಜನರು ಇನ್ನೂ ವಿಮಾನಯಾನದ ಮೂಲಕ ದೇಶ ವಿದೇಶ ಸುತ್ತಲಿದ್ದಾರೆ. ಮಲೆನಾಡಿಗೆ ಏರ್ ಪೋರ್ಟ್ ಕೂಡ ಸೇರ್ಪಡೆಯಾಗುವ ಮೂಲಕ ಪ್ರವಾಸಿ ತಾಣಕ್ಕೆ ಮತ್ತಷ್ಟು ಬಲಬಂದಂತಾಗಿದೆ. ವಿದೇಶಿಗರು ಇನ್ನು ಸುಲಭವಾಗಿ ಮಲೆನಾಡಿನ ಪ್ರವಾಸಿ ತಾಣ ನೋಡಬಹುದಾಗಿದೆ. ಬಿಎಸ್ ಯಡಿಯೂರಪ್ಪ ಏರ್ ಪೋರ್ಟ್ ಕಾಮಗಾರಿ ಪೈನಲ್ ಟಚ್ ವೀಕ್ಷಣೆ ವೇಳೆ ಜನರು ಬಿಎಸ್ ಯಡಿಯೂರಪ್ಪ ಜೊತೆ ಸೇಲ್ಫಿ ತೆಗೆದುಕೊಂಡು ಸಂತಸ ಪಡುತ್ತಿದ್ದರು. ದಶಕಗಳಿಂದ ನೆನಗುದಿಗೆ ಬಿದ್ದಿದ್ದ ಏರ್ ಪೋರ್ಟ್ ಕೊನೆಗೂ ಬಿಎಸ್ ಯಡಿಯೂರಪ್ಪ ಅವರ ನಿರಂತರ ಪರಿಶ್ರಮದಿಂದ ಪೂರ್ಣಗೊಂಡಿದೆ. ಚುನಾವಣೆ ದಿನಾಂಕ ಘೋಷಣೆ ಆಗುವ ಮೊದಲೇ ಮೋದಿಯಿಂದಲೇ ಬಿಎಸ್ ಯಡಿಯೂರಪ್ಪ ಅವರ ಜನ್ಮದಿನದಂದೇ ಫೆ. 27 ರಂದು ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಆಗುತ್ತಿರುವುದು ಮತ್ತೊಂದು ವಿಶೇಷವಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ