ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಎಂದು ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ
ರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದು ಬಿಎಸ್ವೈ ಹೇಳಿದ್ದಾರೆ.
ಶಿವಮೊಗ್ಗ: ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಶಿವಪ್ಪ ನಾಯಕ ಕೃಷಿ ವಿವಿ ಎಂದು ನಾಮಕರಣ ಮಾಡಲಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ಎಂದು ಇಂದು (ಜುಲೈ 24) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬಳಿಕ, ಶಿವಮೊಗ್ಗ ಜಿಲ್ಲೆಯ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ವರ್ಚುವಲ್ ವಿಧಾನದ ಮೂಲಕ ಭಾಗಿಯಾಗಿದ್ದಾರೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಾಲ್ಗೊಂಡಿದ್ದಾರೆ. ಈ ವೇಳೆ, ಸಾಗರ ತಾಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೃಷಿ ವಿವಿಗೆ ಹೆಸರು ಘೋಷಣೆ ಮಾಡಿದ್ದಾರೆ. 2 ವರ್ಷ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಅಭಿವೃದ್ಧಿಗೆ ಗರಿಷ್ಠ ಪ್ರಯತ್ನ ಮಾಡಿದ ತೃಪ್ತಿ ನನಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಏಪ್ರಿಲ್ ವೇಳೆಗೆ ಶಿವಮೊಗ್ಗ ಏರ್‌ಪೋರ್ಟ್ ಕಾರ್ಯಾರಂಭ ಆಗಲಿದೆ ಎಂದೂ ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಒಟ್ಟು ಸುಮಾರು 1,074 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆಯನ್ನು ಅವರು ಇಂದು ನೆರವೇರಿಸಿದ್ದಾರೆ. 560ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದು ಬಿಎಸ್ವೈ ಹೇಳಿದ್ದಾರೆ.
ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ಏರ್‌ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ಎಪ್ರಿಲ್ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ವಿಮಾನ ನಿಲ್ದಾಣ ಆರಂಭದಿಂದ ಶಿವಮೊಗ್ಗ ಮಾತ್ರವಲ್ಲ ಸುತ್ತಲಿನ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗುವ ನಿರೀಕ್ಷೆಯಿದೆ ಎಂದು ಅವರು ಮಾತನಾಡಿದ್ದಾರೆ.
ಇದನ್ನೂ ಓದಿ: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಯಡಿಯೂರಪ್ಪ; 1800 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ
ಶಿವಮೊಗ್ಗದ ಸಣ್ಣ ಅಂಗಡಿಗಳಲ್ಲಿ ಸಿಗೋ ಮೀನು ನಂಗೆ ಬಲು ಇಷ್ಟ; ತಮಿಳು ನಟ ವಿಜಯ್ ಸೇತುಪತಿ
(CM BS Yediyurappa names Shivamogga Agricultural University as Keladi Shivappa Nayaka Krushi VV)