ಶಿವಮೊಗ್ಗದಲ್ಲಿ ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಸಾವು

ಮಳೆಗಾಲ ಬಂತೆದರೆ ಅನಾರೋಗ್ಯದ ಸಮಸ್ಯೆಗಳು ತುಸು ಹೆಚ್ಚಾಗುತ್ತದೆ. ಅದರಲ್ಲೂ ಸೊಳ್ಳೆಗಳ ಉತ್ಪತ್ತಿಯಿಂದ ಜ್ವರದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತದೆ. ಈ ಕುರಿತು ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೇ, ಇದೀಗ ಇಲಿ ಜ್ವರಕ್ಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವತಿ ಬಲಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಸಾವು
ಶಿವಮೊಗ್ಗದಲ್ಲಿ ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಸಾವು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 26, 2024 | 2:47 PM

ಶಿವಮೊಗ್ಗ, ಜು.26: ಇಲಿ ಜ್ವರ(Rat fever)ದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವತಿ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪಲ್ಲವಿ(21) ಮೃತ ರ್ದುದೈವಿ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಪಲ್ಲವಿ ಅವರಿಗೆ ಜುಲೈ 9ರಂದು ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಹತ್ತಿರದ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಲವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು

ಹೌದು, ಜ್ವರದ ತೀವ್ರತೆ ಹೆಚ್ಚಾದ ಹಿನ್ನಲೆ ಮೆಗ್ಗಾನ್​ ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪಲ್ಲವಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿಯೇ ಜುಲೈ 23 ರಂದು ಯುವತಿ ಮೃತಪಟ್ಟಿದ್ದಾರೆ. ಇತ್ತ ಮನೆ ಮಗಳನ್ನು ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು ಇದು ಶಿವಮೊಗ್ಗ ಜಿಲ್ಲೆಯ ಪ್ರಕರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಯಾವುದೇ ಇಲಿ ಜ್ವರ ಪ್ರಕರಣಗಳು ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಡೆಂಗ್ಯೂ, ಚಿಕುನ್ ಗುನ್ಯಾ ಜತೆ ಬೆಂಗಳೂರನ್ನು ಕಾಡುತ್ತಿದೆ ಇಲಿ ಜ್ವರದ ಆತಂಕ: ವೈದ್ಯರು ನೀಡಿದ ಮುನ್ನೆಚ್ಚರಿಕೆ ಸಲಹೆಗಳು ಇಲ್ಲಿವೆ

ಇಲಿ ಜ್ವರ

ಇಲಿ-ಕಚ್ಚಿದ ಜ್ವರ (RBF) ಒಂದು ಝೂನೋಟಿಕ್ ಕಾಯಿಲೆಯಾಗಿದೆ. ಇದು ನೇರವಾಗಿ ಇಲಿಗಳು, ಜರ್ಬಿಲ್‌ಗಳು ಕಚ್ಚುವಿಕೆ ಅಥವಾ ಗೀರುಗಳಿಂದ ಮನುಷ್ಯರಿಗೆ ಹರಡಬಹುದು. ಇನ್ನು ಈ RBF ಗೆ ಕಾರಣವಾಗುವ ಬ್ಯಾಕ್ಟೀರಿಯಾಗಳು ಅಳಿಲುಗಳು, ಫೆರೆಟ್‌ಗಳು, ನಾಯಿಗಳು ಮತ್ತು ಹಂದಿಗಳಲ್ಲಿಯೂ ಕಂಡುಬಂದಿದೆ. ಹೀಗಾಗಿ ಆದಷ್ಟು ಎಚ್ಚರದಿಂದ ಇರುವುದು ಉಳಿತು. ಅದರಲ್ಲೂ ಮಳೆಗಾಲದಲ್ಲಿ ತುಸು ಹೆಚ್ಚು ಜಾಗರೂಕರಾಗಿರಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ