ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನವರು ಈ ಬಾರಿ ಹಿಂದಿನ ಚುನಾವಣೆಗಿಂತಲೂ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು ಸಂಪರ್ಕಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Follow us
Ganapathi Sharma
|

Updated on: Apr 08, 2023 | 11:35 AM

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನವರು (Congress) ಈ ಬಾರಿ ಹಿಂದಿನ ಚುನಾವಣೆಗಿಂತಲೂ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು (BJP) ಸಂಪರ್ಕಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ್ದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ಸೂಚಿಸಿರುವ ವಿಚಾರವಾಗಿ ಮಾತನಾಡಿದ ಅವರು, ನಾನು ಏನು ಮಾಡಲಿ. ಅದು ಅವರಿಗೆ ಬಿಟ್ಟ ವಿಚಾರ. ಸುದೀಪ್ ಈಗಾಗಲೇ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಯಾರು ಕಷ್ಟದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಸಹಾಯ ಮಾಡುವುದಾಗಿ ಅವರು ಘೋಷಿಸಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಕೆ.ಎನ್ ರಾಜಣ್ಣ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆಯುತ್ತೇನೆ ಎಂದಿರುವ ವಿಚಾರವಾಗಿ ಮಾತನಾಡಿದ ಅವರು ಎಲ್ಲರೂ ಕರೆಯುತ್ತಾರೆ, ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ. ಅವರೇ ಹೇಳಿದ್ದಾರೆ ನನ್ನ ಕಷ್ಟ ಕಾಲದಲ್ಲಿ ಯಾರೂ ಕೈಹಿಡಿಯಲಿಲ್ಲ, ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ಏಪ್ರಿಲ್​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್​​​​ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಅಂತಿಮ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಬಿಜೆಪಿ ಗೆಲ್ಲುವ ಪಕ್ಷ, ಹೀಗಾಗಿ ಟಿಕೆಟ್​​ಗಾಗಿ ಪೈಪೋಟಿ ಸಾಮಾನ್ಯ ಎಂದು ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 9 ರಂದೇ ರಾಜ್ಯಕ್ಕೆ ಆಗಮಿಸಲಿದ್ದು, ಹಾಗೇ ಅಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಕಷ್ಟು ಕುತೂಹಲ ಮೂಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ