AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಹೇಳಿಕೆ ಆರೋಪ; ಆರಗ ಜ್ಞಾನೇಂದ್ರ, ಸಿಟಿ ರವಿ ವಿರುದ್ಧ ಕಾಂಗ್ರೆಸ್​ನಿಂದ ದೂರು ದಾಖಲು

ಗೃಹ ಸಚಿವರು ಮತ್ತು ಶಾಸಕ ಸಿ.ಟಿ ರವಿ ಅವರು ಭಾಷೆಯ ಹೆಸರಿನಲ್ಲಿ ಹೇಳಿಕೆ ನೀಡಿ ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ಹಾಗೂ ಸಿಟಿ ರವಿ ವಿರುದ್ಧ ಎಫ್​ಐಆರ್ ದಾಖಲು ಮಾಡುವಂತೆ ದೂರು ಸಲ್ಲಿಸಲಾಗಿದೆ.

ಪ್ರಚೋದನಕಾರಿ ಹೇಳಿಕೆ ಆರೋಪ; ಆರಗ ಜ್ಞಾನೇಂದ್ರ, ಸಿಟಿ ರವಿ ವಿರುದ್ಧ ಕಾಂಗ್ರೆಸ್​ನಿಂದ ದೂರು ದಾಖಲು
ಸಿಟಿ ರವಿ, ಆರಗ ಜ್ಞಾನೇಂದ್ರ
TV9 Web
| Updated By: ganapathi bhat|

Updated on:Apr 09, 2022 | 2:35 PM

Share

ಚಿತ್ರದುರ್ಗ: ಕೋಮು ಗಲಭೆಗೆ ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧ ದೂರು ದಾಖಲು ಮಾಡಲಾಗಿದೆ. ಚಿತ್ರದುರ್ಗದಲ್ಲಿ ಮಾತ್ರ ಅಲ್ಲದೆ, ಪ್ರಚೋದನಾಕಾರಿ ಹೇಳಿಕೆ ಆರೋಪದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್​ನಿಂದ ವಿವಿಧೆಡೆ ದೂರು ನೀಡಲಾಗಿದೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಗೆ ತೆರಳಿ ಕೆಪಿಸಿಸಿ ವಕ್ತಾರ ಡಿ. ಬಸವರಾಜ ನೇತ್ರತ್ವದಲ್ಲಿ ದೂರು ನೀಡಲಾಗಿದೆ. ದೇಶದಲ್ಲಿ ಕರ್ನಾಟಕ ಪೊಲೀಸ್ ಅಂದ್ರೆ ಒಳ್ಳೆಯ ಹೆಸರಿದೆ. ಬೆಂಗಳೂರಿನಲ್ಲಿ ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಆದ್ರೆ ಗೃಹ ಸಚಿವರು ಮತ್ತು ಶಾಸಕ ಸಿ.ಟಿ ರವಿ ಅವರು ಭಾಷೆಯ ಹೆಸರಿನಲ್ಲಿ ಹೇಳಿಕೆ ನೀಡಿ ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ಬಗ್ಗೆ, ಇವರಿಬ್ಬರ ವಿರುದ್ಧ ಎಫ್​ಐಆರ್ ದಾಖಲು ಮಾಡುವಂತೆ ದೂರು ಸಲ್ಲಿಸಲಾಗಿದೆ.

ಗೃಹ ಮಂತ್ರಿ ಆರಗ ಜ್ಞಾನೇಂದ್ರ ಬಂಧನಕ್ಕೆ ಒತ್ತಾಯಿಸಿ ಇತ್ತ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಎಸ್​ಪಿ ಕಚೇರಿಗೆ ದೂರು ನೀಡಲಾಗಿದೆ. ಹೆಚ್ಚುವರಿ ಎಸ್​ಪಿ ವಿಕ್ರಮ್ ಆಮ್ಟೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ. ಮಾಜಿ ಶಾಸಕರ ಬೇಳೂರು ಗೋಪಾಲಕೃಷ್ಣ, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗನಾಥ್ ಸೇರಿ ಹಲವರು ಭಾಗಿ ಆಗಿದ್ದಾರೆ.

ಬಿಜೆಪಿ ಸರ್ಕಾರದ ತಿಥಿ ಕಾರ್ಯ ಮಾಡಿ ಆಕ್ರೋಶ

ಮತ್ತೊಂದೆಡೆ ರಾಜ್ಯದಲ್ಲಿ ಬೆಲೆ ಎರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ವಿನೂತನವಾಗಿ ಪ್ರತಿಭಟನೆ ಮಾಡಿ ಬೆಲೆ ಎರಿಕೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದ್ದಾರೆ. ಎತ್ತಿನ ಬಂಡಿ ಹಾಗೂ ತಳ್ಳು ಗಾಡಿಯ ಮೇಲೆ ಬೈಕ್ ಇಟ್ಟು ಪ್ರತಿಭಟನೆ ಮಾಡಲಾಗಿದೆ. ಬೈಕ್ ಹಾಗೂ ಸಿಲಿಂಡರ್ ನೇಣಿಗೆ ಎರಿಸಿ ಪೆಟ್ರೋಲ್ ಬೆಲೆ ಏರಿಕೆಗೆ ಖಂಡನೆ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರದ ತಿಥಿ ಕಾರ್ಯ ಮಾಡಿ ಆಕ್ರೋಶ ವ್ಯಕ್ತವಾಗಿದೆ.

ಕಲಬುರಗಿ: ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಯೂತ್​ ಕಾಂಗ್ರೆಸ್ ​ಪ್ರತಿಭಟನೆ ನಡೆಸಿದೆ. ನಗರದ ಸರ್ಧಾರ್ ಪಟೇಲ್ ವೃತ್ತದಲ್ಲಿ ​ನಲಪಾಡ್​ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗಿದೆ. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ಕೊಪ್ಪಳ: ಬೆಲೆ ಏರಿಕೆ ಖಂಡಿಸಿ‌‌ ಕೊಪ್ಪಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಿಲಿಂಡರ್, ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ‌ ವ್ಯಕ್ತವಾಗಿದೆ. ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಪ್ರತಿಭಟನೆ ಮಾಡಲಾಗಿದ್ದು ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಹೊರಹಾಕಿದ್ದಾರೆ.

ಧಾರವಾಡ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಧಾರವಾಡದಲ್ಲಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ ನಡೆಸಲಾಗಿದೆ. ಜಯನಗರ ಸರ್ಕಲ್‌ನಲ್ಲಿ ರಸ್ತೆ ಮಧ್ಯೆ ಸಿಲಿಂಡರ್ ಇಟ್ಟು, ಪೂಜೆ ಸಲ್ಲಿಸಿ ಪ್ರತಿಭಟನೆ ನಡೆಸಲಾಗಿದೆ. ಎಣ್ಣೆ ಖಾಲಿ ಡಬ್ಬಗಳ ಬಾರಿಸುತ್ತ, ಅಗತ್ಯ ವಸ್ತು ಬೆಲೆ ನಿಯಂತ್ರಿಸಲು ಆಗ್ರಹ ಕೇಳಿಬಂದಿದೆ. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ರಾಮನಗರ: ರಾಮನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಐಜೂರು ವೃತ್ತದವರೆಗೂ ಮೆರವಣಿಗೆ ನಡೆಸಿ, ಎತ್ತಿನಗಾಡಿ, ಖಾಲಿ ಗ್ಯಾಸ್ ಲಿಸಿಂಡರ್ ಮೂಲಕ ಪ್ರತಿಭಟನೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಶತ್ರು ಪೀಡೆ, ಸಂಕಷ್ಟ ನಿವಾರಣೆ ಸೇರಿ ನಾನಾ ಕಾರಣಕ್ಕೆ ಅಸ್ಸಾಂನ ಕಾಮಾಖ್ಯ ದೇಗುಲದಲ್ಲಿ ಡಿ.ಕೆ. ಶಿವಕುಮಾರ್ ಹೋಮ

ಇದನ್ನೂ ಓದಿ: ಉರ್ದು ಬರಲ್ಲ ಅಂದಿದ್ದಕ್ಕೆ ಚಂದ್ರು ಕೊಲೆ ನಡೆದಿದೆ, ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ- ಎಂಎಲ್​ಸಿ ರವಿಕುಮಾರ್ ಆರೋಪ

Published On - 2:14 pm, Sat, 9 April 22

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ