ಯಡಿಯೂರಪ್ಪರನ್ನು ಹಾಡಿಹೊಗಳಿದ ಕಾಂಗ್ರೆಸ್ ನೂತನ ಎಂಎಲ್ಸಿ ಮಂಜುನಾಥ್ ಭಂಡಾರಿ: ಮಧು ಬಂಗಾರಪ್ಪ ಸೇರಿ ಹಲವರಿಗೆ ಅಚ್ಚರಿ
ಅಂದು ನಿನ್ನ ಪ್ರಚಾರ ನನ್ನನ್ನ ಶಿವಮೊಗ್ಗ ಬಿಟ್ಟು ಹೋಗಲು ಬಿಟ್ಟಿರಲಿಲ್ಲ ಎಂದು ಖುದ್ದು ಬಿ.ಎಸ್. ಯಡಿಯೂರಪ್ಪ ಹೇಳಿರುವುದು ನನಗೆ ರೋಮಾಂಚನಗೊಳಿಸಿತ್ತು. ನನ್ನ ಇಂಜಿನಿಯರ್ ಕಾಲೇಜಿನ ಪ್ರಾರಂಭಿಸಲು ಬಿಎಸ್ವೈ ಬಳಿ ಹೋಗಿದ್ದಾಗ ಹಿಂದೆ ಮುಂದೆ ನೋಡದೆ ಅನುಮತಿ ನೀಡಿದ್ದರು ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.
ಶಿವಮೊಗ್ಗ: ಇಂದು ಕುವೆಂಪು ರಂಗಮಂದಿರದಲ್ಲಿ ನೂತನ ಎಂಎಲ್ಸಿಗೆ (MLC)ಅಭಿನಂದನಾ ಸಮಾರಂಭ ಆಯೋಜನೆ ಮಾಡಲಾಗಿತ್ತು. ಅಭಿನಂದನೆ ಸ್ವೀಕರಿಸಿದ ಕಾಂಗ್ರೆಸ್ ನೂತನ ಎಂಎಲ್ಸಿ ಮಂಜುನಾಥ್ ಭಂಡಾರಿ (Manjunath Bhandari) ಬಳಿಕ ಮಾತನಾಡಿದ್ದು, ಯಡಿಯೂರಪ್ಪರನ್ನು(bs yediyurappa) ಹಾಡಿಹೊಗಳಿದ್ದಾರೆ. 2014ರ ಎಂಪಿ ಚುನಾವಣೆಯಲ್ಲಿ ಬಿಎಸ್ವೈ ವಿರುದ್ಧ ಸ್ಪರ್ಧಿಸಿದ್ದೆ. ಅಂದು ನಿನ್ನ ಪ್ರಚಾರ ನನ್ನನ್ನ ಶಿವಮೊಗ್ಗ ಬಿಟ್ಟು ಹೋಗಲು ಬಿಟ್ಟಿರಲಿಲ್ಲ ಎಂದು ಖುದ್ದು ಬಿ.ಎಸ್. ಯಡಿಯೂರಪ್ಪ ಹೇಳಿರುವುದು ನನಗೆ ರೋಮಾಂಚನಗೊಳಿಸಿತ್ತು. ನನ್ನ ಇಂಜಿನಿಯರ್ ಕಾಲೇಜಿನ ಪ್ರಾರಂಭಿಸಲು ಬಿಎಸ್ವೈ ಬಳಿ ಹೋಗಿದ್ದಾಗ ಹಿಂದೆ ಮುಂದೆ ನೋಡದೆ ಅನುಮತಿ ನೀಡಿದ್ದರು ಎಂದು ತಿಳಿಸಿದ್ದಾರೆ.
ಓರ್ವ ಕಾಂಗ್ರೆಸ್ ಮುಖಂಡ ಮತ್ತು ಕಾಂಗ್ರೆಸ್ ಎಂಎಲ್ಸಿ ಆದ್ರೂ ಬಿಜೆಪಿ ಯ ಮಾಜಿ ಸಿಎಂ ಬಿಎಸ್ವೈ ಗುಣಗಾನ ಮಾಡಿದ್ದಾರೆ. ಇಂದು (ಮಾರ್ಚ್ 12) ನಡೆದ ನೂತನ ಎಂಎಲ್ಸಿಗೆ ಅಭಿನಂದನಾ ಸಮಾರಂಭದ ವೇದಿಕೆಯಲ್ಲಿ ಕಾಂಗ್ರೆಸ್ನ ಮಾಜಿ ಡಿಸಿಎಂ ಪರಮೇಶ್ವರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಎಂಬಿ ಪಾಟೀಲ್, ಮಧು ಬಂಗಾರಪ್ಪ ಸೇರಿ ಹಲವರು ಆಸಿನರಾಗಿದ್ದರು.
ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ: ಸಿಎಂ ಇಬ್ರಾಹಿಂ
ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ನಮ್ಮನ್ನು ಬಳಸಿಕೊಳ್ಳುತ್ತಿದೆ, ಆದರೆ ಅಧಿಕಾರ ಕೊಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯಲು, ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿ.ಎಂ.ಇಬ್ರಾಹಿಂ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1995ನೇ ಇಸವಿಯಲ್ಲಿ ಆಗಿದ್ದ ಬೆಳವಣಿಗೆಯೇ ಈಗಲೂ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ನೆಲೆ ಕಳೆದುಕೊಳ್ಳುತ್ತಿದೆ ಎನ್ನುವುದನ್ನು ನಾನು ಹಲವು ದಿನಗಳಿಂದ ಹೇಳುತ್ತಲೇ ಇದ್ದೇನೆ ಎಂದು ಹೇಳಿದರು.
ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ. ಆದರೆ ಕರ್ನಾಟಕವನ್ನ ಉತ್ತರ ಪ್ರದೇಶ ಆಗಲು ನಾವು ಬಿಡುವುದಿಲ್ಲ. ಇದು ಬಸವಣ್ಣ, ಸರ್ವಜ್ಞ, ಕನಕದಾಸ, ಪುರಂದರದಾಸ, ರಾಘವೇಂದ್ರ ಸ್ವಾಮಿಗಳ ಪುಣ್ಯಸ್ಥಳ. ಹೀಗಾಗಿ ನಾನಿವತ್ತು ಕಾಂಗ್ರೆಸ್ ಪಕ್ಷ ತೊರೆದು ನನ್ನ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು.
ನಾನು ಸ್ವಾಭಿಮಾನದಿಂದ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ರಾಜೀನಾಮೆ ಅಂಗೀಕಾರ ಮಾಡುವುದು ಅವರಿಗೆ ಸೇರಿದ್ದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ. ನಾನು ಮುಂದೆ ಯಾವ ನಿರ್ಧಾರ ಬೇಕಿದ್ದರೂ ತೆಗೆದುಕೊಳ್ಳಬೇಕು. ನೀವೂ ಪಕ್ಷ ತೊರೆಯಬೇಡಿ ಅಂತಾ ಜನರನ್ನು ಕಳುಹಿಸಿದ್ರು. ಪಕ್ಷ ತೊರೆಯಬೇಡಿ ಎಂದು ನನ್ನನ್ನು ಬೈಯಿಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ, ಸಿದ್ದರಾಮಾಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ನುಡಿದರು.
ಕೆಲವರನ್ನ ಪಕ್ಷದಿಂದ ಅವರೇ ತಳ್ಳುತ್ತಿದ್ದಾರೆ. ನನ್ನನ್ನು ತಳ್ಳುವ ಮೊದಲೇ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ನನ್ನ ಜೊತೆ ಅನೇಕರು ಬರುತ್ತಾರೆ. ಮುಂದೆ ದೇವೇಗೌಡ, ಕುಮಾರಣ್ಣ, ರೇವಣ್ಣರ ಜೊತೆ ಚರ್ಚೆ ಮಾಡಿ ನಿರ್ಣಯ ಪ್ರಕಟ ಮಾಡುತ್ತೇನೆ ಎಂದರು.
ಇದನ್ನೂ ಓದಿ:
ರಾಜೀನಾಮೆ ನಿರ್ಧಾರ ಪ್ರಕಟಿಸಿದ ಸಿಎಂ ಇಬ್ರಾಹಿಂ: ಕಾಂಗ್ರೆಸ್ನಿಂದ ಮುಸ್ಲಿಮರ ನಿರ್ಲಕ್ಷ್ಯ ಆರೋಪ
ಫೆಬ್ರವರಿ 14ರಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ, ಅಂದೇ ಮುಂದಿನ ರಾಜಕೀಯ ನಿರ್ಧಾರ ಪ್ರಕಟ: ಸಿಎಂ ಇಬ್ರಾಹಿಂ
Published On - 4:25 pm, Sat, 12 March 22