ಅಪಪ್ರಚಾರದ ಮೂಲಕ ಬಿಜೆಪಿಯನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ: ಬಿವೈ ರಾಘವೇಂದ್ರ

ಕುಮಾರ್ ಬಂಗಾಪ್ಪ ನಮ್ಮ ಪಕ್ಷದ ಹಿರಿಯ ನಾಯಕರು, ಅವರಷ್ಟೇ ಅಲ್ಲ ಶಾಸಕರಾಗಿರುವ ಯಾರೂ ಸಹ ಪಕ್ಷವನ್ನು ತೊರೆಯುವುದಿಲ್ಲ ಎಂದು ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದಲ್ಲಿ ಸ್ಪಷ್ಟಪಡಿಸಿದ್ದಾರೆ.

ಅಪಪ್ರಚಾರದ ಮೂಲಕ ಬಿಜೆಪಿಯನ್ನು ದುರ್ಬಲಗೊಳಿಸುವ ಸಂಚು ನಡೆಯುತ್ತಿದೆ: ಬಿವೈ ರಾಘವೇಂದ್ರ
ಬಿವೈ ರಾಘವೇಂದ್ರ
Follow us
Basavaraj Yaraganavi
| Updated By: Ganapathi Sharma

Updated on: Aug 28, 2023 | 11:56 AM

ಶಿವಮೊಗ್ಗ, ಸಪ್ಟೆಂಬರ್, 28: ಬಿಜೆಪಿ ಪಕ್ಷದ ಮೇಲೆ ಅಪಪ್ರಚಾರ ಮಾಡುವ ಮೂಲಕ ವಿರೋಧ ಪಕ್ಷವನ್ನು ದುರ್ಬಲಗೊಳಿಸುವ ಸಂಚನ್ನು ಕಾಂಗ್ರೆಸ್ ಪಕ್ಷದವರು ಮಾಡುತ್ತಿದ್ದಾರೆ ಎಂದು ಬಿಜೆಪಿ (BJP) ಸಂಸದ ಬಿವೈ ರಾಘವೇಂದ್ರ (BY Raghaveendra) ಹೇಳಿದ್ದಾರೆ. ಆಪರೇಷನ್ ಹಸ್ತದ ಶಿವಮೊಗ್ಗದಲ್ಲಿ (Shivamogga) ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್​ನವರು ಅವರ ದೌರ್ಬಲ್ಯವನ್ನು ಮುಚ್ಚಿಕೊಳ್ಳುಲು ಈ ರೀತಿ ಅಪಪ್ರಚಾರವನ್ನು ಅಸ್ತ್ರ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕುಮಾರ್ ಬಂಗಾಪ್ಪ ನಮ್ಮ ಪಕ್ಷದ ಹಿರಿಯ ನಾಯಕರು, ಅವರಷ್ಟೇ ಅಲ್ಲ ಶಾಸಕರಾಗಿರುವ ಯಾರೂ ಸಹ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತದ ಕುರಿತು ಭಾರಿ ಚರ್ಚೆಗಳಾಗುತ್ತಿದ್ದು, ಎಸ್​​​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವು ನಾಯಕರು ಬಿಜೆಪಿಯನ್ನು ತೊರೆದು ಮಾತೃಪಕ್ಷಕ್ಕೆ ತೆರಳುತ್ತಾರೆ ಎನ್ನಲಾಗಿತ್ತು.

ಈ ಮೊದಲು ಪಕ್ಷಾಂತರವಾದ ನಾಯಕರಿಗೆ ಕಾಂಗ್ರೆಸ್ ಅವಕಾಶ ನೀಡುತ್ತಿರಲಿಲ್ಲ. ಆದರೆ ಈಗ ತಮ್ಮ ಸಿದ್ಧಾಂತಗಳನ್ನು ಒಪ್ಪಿಕೊಂಡರೆ ಪಕ್ಷ ಸೇರಬಹುದು ಎಂದಿದೆ. ಆದರೆ ಪಕ್ಷ ಸೇರುವಾಗ ಯಾವುದೇ ಬೇಡಿಕೆಗಳನ್ನೂ ಇಡಬಾರದೂ ಎಂಬ ಷರತ್ತನ್ನೂ ಹಾಕಿದೆ. ‘ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು’ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಪಕ್ಷಾಂತರವನ್ನು ಪುಷ್ಠೀಕರಿಸಿತ್ತು. ಆದರೆ, ಕಾಂಗ್ರೆಸ್ ಪಕ್ಷ ತೊರೆದವರು ಮರಳಿ ಕಾಂಗ್ರೆಸ್ ಗೆ ಮರಳುವುದನ್ನು ಶಾಸಕ ತನ್ವೀರ್ ಸೇಠ್ ಹಾಗೂ ಶಾಸಕ ಭೀಮಣ್ಣ ನಾಯ್ಕ್ ಸೇರಿದಂತೆ ಹಲವರು ವಿರೋಧಿಸಿದ್ದಾರೆ.

ಸರ್ಕಾರ ನಡೆಯನ್ನು ಪ್ರಶ್ನಿಸಿದ ರಾಘವೇಂದ್ರ

ಪಠ್ಯದ ವಿಚಾರದಲ್ಲಿ ಎನ್ಇಪಿ ಹಾಗೂ ಎಸ್​​ಇಪಿಗಳ ಮಧ್ಯೆ ಗೊಂದಲ ಉಂಟಾಗಿದ್ದು, ಇದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದರು. ಅವರು ಗ್ಯಾರಂಟಿ ಯೋಜನೆ ಜಾರಿ ಮಾಡಲಿ ತೊಂದರೆ ಇಲ್ಲ. ಆದರೆ ಅವರು ಅಕ್ಕಿ ಎಷ್ಟು ಕೊಡುತ್ತಾರೆ ಎನ್ನುವುದು ತಿಳಿದಿಲ್ಲ. ಫ್ರೀ ಕರೆಂಟ್ ಎಂದು ಘೋಷಣೆ ಮಾಡಿದ್ದಾರೆ. ಆದರೆ ಪವರ್ ಕಟ್ ಈಗಲೇ ಆರಂಭವಾಗಿ ಸರಿಯಾದ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ರೈತರ ಪಂಪ್ ಸೆಟ್ ಹಾಗೂ ಬೋರ್ ವೆಲ್ ಗಳಿಗೂ ನೀರು ತುಂಬಿಸಲು ಸಾಧ್ಯವಾಗುತ್ತಿಲ್ಲ. ಹೊಲಗಳಿಗೆ ನೀರಿಲ್ಲದೆ ಬಿತ್ತಿದ ಜೋಳಗಳೆಲ್ಲವೂ ಒಣಗಿ ಹೋಗಿದೆ. ಇತ್ತ ತುಂಗಾ,ಭದ್ರಾ ನದಿಯೂ ಹರಿವು ನಿಲ್ಲಿಸಿದೆ. ಬರಗಾಲದ ಸಂದರ್ಭದಲ್ಲಿ ಸರ್ಕಾರ ಜನರಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಆಪರೇಷನ್ ಹಸ್ತ ಅಲ್ಲ ಬಿಜೆಪಿ ಅವ್ಯವಸ್ಥೆಗೆ ಪಕ್ಷ ಬಿಡುತ್ತಿದ್ದಾರೆ ಎನ್ನುತ್ತಿರುವ ಕಾಂಗ್ರೆಸ್ ನಾಯಕರು; ಕಮಲ ಪಡೆ ಹೇಳುವುದೇನು?

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 1 ರಿಂದ ವಿಮಾನ ಸಂಚಾರ: ರಾಘವೇಂದ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 1 ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಿಂದ 9.50ಕ್ಕೆ ಹೊರಟ ಇಂಡಿಗೋ ವಿಮಾನ 11.05 ಕ್ಕೆ ಬೆಂಗಳೂರು ತಲುಪಲಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಾಜರಿರಲಿದ್ದಾರೆ. ಈ ನಿಲ್ದಾಣಕ್ಕೆ ಕುವೆಂಪು ವಿಮಾನ ನಿಲ್ದಾಣ ಎಂದು ಹೆಸರಿಸಲಾಗಿದೆ. ಸದ್ಯದ ಮಟ್ಟಿಗೆ ದೇಶೀಯ ವಿಮಾನಗಳ ಹಾರಟ ಆರಂಭವಾಗಲಿದೆ.

ರಾಜಕೀಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ