Shivamogga Bomb Blast: ಶಿಕಾರಿಪುರ ಬಳಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟಗೊಂಡಿದೆ. ಮುಡಬಸಿದ್ಧಾಪುರದಿಂದ ಶಿಕಾರಿಪುರಕ್ಕೆ ಬರುವ ಮಾರ್ಗದಲ್ಲಿ ಹಿರೇಕಲವತ್ತಿ ಬಳಿ ಸ್ಫೋಟ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಂದಿಗಳಿಂದ ಬೆಳೆ ರಕ್ಷಣೆಗೆ ಬಳಸುವ ಬಾಂಬ್ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Shivamogga Bomb Blast: ಶಿಕಾರಿಪುರ ಬಳಿ ಕೆಎಸ್ಆರ್‌ಟಿಸಿ ಬಸ್ ಕೆಳಗೆ ನಾಡಬಾಂಬ್ ಸ್ಫೋಟ, ಪ್ರಯಾಣಿಕರು ಬಚಾವ್
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಾಡಬಾಂಬ್ ಸ್ಫೋಟ
Updated By: Digi Tech Desk

Updated on: Dec 02, 2025 | 3:14 PM

ಶಿವಮೊಗ್ಗ, ಡಿಸೆಂಬರ್ 02: ಸೋಮವಾರ ಶಿವಮೊಗ್ಗದ (Shivamogga) ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಕೆಎಸ್ಆರ್‌ಟಿಸಿ ಬಸ್‌ನ ಕೆಳಭಾಗದಲ್ಲಿ ನಾಡಬಾಂಬ್ ಸ್ಫೋಟಗೊಂಡಿದ್ದು (Country Bomb Blast) , ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಅದೃಷ್ಟವಶಾತ್ ದೊಡ್ಡ ಅನಾಹುವೇನೂ ಆಗದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳೆ ರಕ್ಷಣೆಗೆ ನಾಡಬಾಂಬ್​ ಬಳಸುತ್ತಿದ್ದ ರೈತರು

ಮುಡಬಸಿದ್ಧಾಪುರದಿಂದ ಶಿಕಾರಿಪುರಕ್ಕೆ ಆಗಮಿಸುತ್ತಿದ್ದ ಬಸ್ ಹಿರೇಕಲವತ್ತಿಯ ಬಳಿ ಸ್ಫೋಟ ಸಂಭವಿಸಿದ್ದು, ಜೋರಾದ ಸ್ಫೋಟದ ಸದ್ದಿನಿಂದಾಗಿ ಬಸ್ ತಕ್ಷಣವೇ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿದ್ದ ಟಿಸಿಗೆ ಡಿಕ್ಕಿ ಹೊಡೆದು ನಿಂತಿತ್ತು. ಬಸ್ ನಿಲ್ಲಿಸಿದ ಚಾಲಕ ಮತ್ತು ನಿರ್ವಾಹಕರಿಬ್ಬರೂ ಪರಿಶೀಲನೆಗೆಂದು ಇಳಿದಾಗ ನಾಡಬಾಂಬ್ ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದೆ. ಹಂದಿಗಳಿಂದ ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ನಾಡಬಾಂಬ್​ಗಳನ್ನು ಬಳಸುತ್ತಿದ್ದು,ಬಾಂಬ್ ಕೊಂಡೊಯ್ಯುವ ವೇಳೆ ರಸ್ತೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ ಮಂಡ್ಯದಲ್ಲಿ ನಾಡಬಾಂಬ್ ಸ್ಫೋಟ , ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಸ್ಫೋಟದಿಂದ ತಪ್ಪಿಸಿಕೊಂಡ 45 ವಿದ್ಯಾರ್ಥಿಗಳು

ಅದೃಷ್ಟವಶಾತ್ 7 ನಿಮಿಷಗಳ ಹಿಂದೆಯೇ 45 ವಿದ್ಯಾರ್ಥಿಗಳು ಇದೇ ಬಸ್​ನಲ್ಲಿ ಪ್ರಯಾಣಿಸುತ್ತಿದ್ದು, ಅನಾಹುತದಿಂದ ಪಾರಾಗಿದ್ದಾರೆ. ಘಟನೆಯ ನಂತರ ಮಾತನಾಡಿರುವ ಬಸ್ ಚಾಲಕ ಬಸವರಾಜ್, ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Tue, 2 December 25