ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ

ಪ್ರತ್ಯೇಕ ಪ್ರಕರಣ: ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು ಕದ್ದು ಪರಾರಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮದಲ್ಲಿ ಎರಡು ಲಕ್ಷ ಬೆಲೆ ಬಾಳುವ ಹಸುಗಳನ್ನು ಕಳ್ಳತನ ಮಾಡಲಾಗಿದೆ.

ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ
ಹಸು ಕಳ್ಳತನ
Follow us
| Updated By: ವಿವೇಕ ಬಿರಾದಾರ

Updated on:Sep 29, 2024 | 2:54 PM

ಶಿವಮೊಗ್ಗ, ಸೆಪ್ಟೆಂಬರ್​ 29: ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು (Cow) ಕದ್ದು ಪರಾರಿಯಾಗಿರುವ ಘಟನೆ ಸೊರಬದಲ್ಲಿ (Soraba) ನಡೆದಿದೆ. ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. KA 01 MZ 5843 ಬೂದು ಬಣ್ಣದ ಟೊಯೀಟಾ FORTUNER ಕಾರು ಕಳ್ಳರು ಮಂಕಿ ಕ್ಯಾಪ್ ಹಾಕಿಕೊಂಡು ಬಂದು, ಆಕಳುವೊಂದನ್ನು ಕಳ್ಳತನ ಮಾಡಿದ್ದಾರೆ.

ಹಸು ಕದ್ದ ವಿಷಯ ತಿಳಿದ ಕೂಡಲೇ ಸ್ಥಳೀಯರು ಕಾರನ್ನು ಅಡ್ಡ ಹಾಕಲು ಯತ್ನಿಸಿದ್ದಾರೆ. ಆದರೆ, ಕಳ್ಳರು ಸ್ಥಳೀಯರ ಮೇಲೆ ಕಾರು ಹತ್ತಿಸುವ ಯತ್ನಿಸಿದ್ದಾರೆ. ಘಟನೆ ಕುರಿತು ಸ್ಥಳೀಯರು ಸೊರಬ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೊರಬದಲ್ಲಿ ಇತ್ತೀಚೆಗೆ ಹಸು ಕಳವು ಹೆಚ್ಚಾಗುತ್ತಿದೆ. ಹೀಗಾಗಿ ಹಸು ಕಳ್ಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕತ್ತೆ ಮಾರಾಟ ಮಾಡಿ ಮಹಾಮೋಸ; ಕಂಪನಿ ಮಾಲೀಕ, ಸದಸ್ಯರು ನಾಪತ್ತೆ

ಎರಡು ಲಕ್ಷ ಬೆಲೆ ಬಾಳುವ ಹಸುಗಳ ಕಳ್ಳತನ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮದಲ್ಲಿ ಎರಡು ಲಕ್ಷ ಬೆಲೆ ಬಾಳುವ ಹಸುಗಳನ್ನು ಕಳ್ಳತನ ಮಾಡಲಾಗಿದೆ. ರೈತ ತಿಮ್ಮಪ್ಪಯ್ಯ ಅವರ ಎರಡು ಹಸು ಮತ್ತು ಒಂದು ಕರು ಅನ್ನು ಕದ್ದು ಪರಾರಿಯಾಗಿದ್ದಾರೆ. ಮನೆಗೆ ಅಧಾರವಾಗಿದ್ದ ಹಸುಗಳನ್ನು ಕಳೆದುಕೊಂಡು ರೈತ ತಿಮ್ಮಪ್ಪಯ್ಯ ಕಂಗಾಲ ಆಗಿದ್ದಾರೆ. ನೆಲಮಂಗಲದಲ್ಲಿ ಹೆಚ್ಚಾಗುತ್ತಿರುವ ಹಸುಗಳ ಕಳ್ಳತನ ಹೆಚ್ಚಾಗುತ್ತಿದೆ. ಖದೀಮರು ರಾತ್ರೊರಾತ್ರಿ ಹಸುಗಳನ್ನು ಕದ್ದು ಪರಾರಿಯಾಗುತ್ತಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧನ ಕೈ ಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನ,ಹಣ ಕಳವು

ಚಾಮರಾಜನಗರ: ಕಳ್ಳರು ವೃದ್ಧನ ಕೈ ಕಾಲು ಕಟ್ಟಿ ಮನೆಯಲ್ಲಿದ್ದ ಚಿನ್ನ,ಹಣ ಕದ್ದು ಪರಾರಿಯಾಗಿರುವ ಘಟನೆ ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮದ ಬಳಿ ನಡೆದಿದೆ. ಜಗದೀಶ ಎಂಬುವರ ಮನೆಯಲ್ಲಿ ಬೆಳ್ಳಂ ಬೆಳಗ್ಗೆ ಘಟನೆ ನಡೆದಿದೆ. ಜಗದೀಶ್​ ಅವರ ಪತ್ನಿ ರುಕ್ಮಿಣಿ ಹಾಲು ಹಾಕಲು ಡೈರಿಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಇಬ್ಬರು ಅಪರಿಚಿತರು ಜಗದೀಶ್​ ಅವರ ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿದ್ದಾರೆ.

ನಂತರ ಮನೆಯಲ್ಲಿದ್ದ 168 ಗ್ರಾಂ ಚಿನ್ನ, 41 ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ರಾಮಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Sun, 29 September 24

Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ
Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ